Untitled Document
Sign Up | Login    
Dynamic website and Portals
  
July 16, 2016

ಐದು ವಿಧೇಯಕಗಳ ಮಂಡನೆ, ಅಂಗೀಕಾರ

ಬೆಂಗಳೂರು : ರಾಜ್ಯ ವಿಧಾನಸಭೆಯಲ್ಲಿ ಶಾಸನ ರಚನೆ ಕಾರ್ಯದ ಅಂಗವಾಗಿ ಐದು ವಿಧೇಯಕಗಳು ಮಂಡಿಸಲ್ಪಟ್ಟಿದ್ದು, ಐದು ವಿಧೇಯಕಗಳಿಗೂ ಧ್ವನಿ ಮತದಿಂದ ಅಂಗೀಕಾರ ದೊರೆಯಿತು.

ಅರಣ್ಯ ಸಚಿವ ರಮಾನಾಥ್ ರೈ ಅವರು ಕರ್ನಾಟಕ ಅರಣ್ಯ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಕಾನೂನು ಹಾಗೂ ಸಂಸದೀಯ ಸಚಿವ ಟಿ.ಬಿ. ಜಯಚಂದ್ರ ಅವರು ಗೃಹ ಸಚಿವರ ಪರವಾಗಿ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಮಂಡಿಸಿದರು. ಸಹಕಾರ ಸಚಿವ ಹೆಚ್.ಎಸ್. ಮಹಾದೇವ ಪ್ರಸಾದ್ ಅವರು ಕರ್ನಾಟಕ ಸೌಹಾರ್ಧ ಸಹಕಾರಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು,

ಕೃಷಿ ಮಾರುಕಟ್ಟೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ನಿಯಂತ್ರಣ ವಿಧೇಯಕವನ್ನು ಮಂಡಿಸಿದರು, ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು 2016 ರ ಕರ್ನಾಟಕ ಗೃಹ ನಿರ್ಮಾಣ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಎಲ್ಲಾ ಐದು ವಿಧೇಯಕಗಳು ಧ್ವನಿ ಮತದಿಂದ ಅನುಮೋದನೆಗೊಂಡವು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited