Untitled Document
Sign Up | Login    
Dynamic website and Portals
  
July 19, 2016

ಗಲಭೆ ಹಿನ್ನಲೆಯಲ್ಲಿ ಶ್ರೀನಗರದಿಂದ ಸ್ಥಳಾಂತರಗೊಳ್ಳುತ್ತಿರುವ ಕಾಶ್ಮೀರಿ ಪಂಡಿತರು

ನವದೆಹಲಿ : ಉಗ್ರ ಬುರ್ಹಾನ್ ವನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾದ ಕಾರಣ ಶ್ರೀನಗರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 600 ಕಾಶ್ಮೀರಿ ಪಂಡಿತರು ತಮ್ಮ ಕುಟುಂಬಸ್ಥರೊಂದಿಗೆ ಜಮ್ಮುಗೆ ಸ್ಥಳಾಂತರಗೊಂಡಿದ್ದಾರೆ.

ಶ್ರೀನಗರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ ನಿರ್ಮಿಸಿದ್ದ ಕ್ಯಾಂಪ್​ಗಳಲ್ಲಿ ಈಗ ಯಾರೂ ವಾಸಿಸುತ್ತಿಲ್ಲ ಎಂದು ತಿಳಿದುಬಂದಿದೆ.

2010 ರಿಂದ ಕಾಶ್ಮೀರಿ ಪಂಡಿತರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ಕರೆತರುವ ಪ್ರಯತ್ನ ನಡೆಯುತ್ತಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. ಈ ಯೋಜನೆಯನ್ವಯ ಜಮ್ಮು ಮತ್ತು ಕಾಶ್ಮೀರದಲ್ಲಿ 1673 ಜನರಿಗೆ ಉದ್ಯೋಗ ನೀಡಲಾಗಿದೆ. ಇವರಲ್ಲಿ ಸುಮಾರು 600 ಜನರು ವಾಪಸ್ಸಾಗಿರುವ ಕುರಿತು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಶ್ರೀನಗರದಿಂದ ವಾಪಸ್ಸಾಗಿರುವ ಕಾಶ್ಮೀರಿ ಪಂಡಿತರು ತಮಗೆ ಜಮ್ಮುವಿನ ಬಳಿ ಇರುವ ಕಚೇರಿಗಳಿಗೆ ವರ್ಗ ಮಾಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited