Untitled Document
Sign Up | Login    
Dynamic website and Portals
  
July 19, 2016

ನೆಲಬಾಂಬ್ ಸ್ಪೋಟ: 10 ಸಿಆರ್​ಪಿಎಫ್ ಕಮಾಂಡೋಗಳು ಸಾವು

ಪಾಟ್ನಾ : ನಕ್ಸಲರು ಹೂತಿಟ್ಟಿದ್ದ ನೆಲಬಾಂಬ್ ಸ್ಪೋಟಗೊಂಡು 10 ಸಿಆರ್​ಪಿಎಫ್ ಕಮಾಂಡೋಗಳು ಸಾವನ್ನಪ್ಪಿದ್ದು, 5 ಯೋಧರು ಗಾಯಗೊಂಡಿರುವ ಘಟನೆ ಬಿಹಾರದ ಗಯಾ ಮತ್ತು ಔರಂಗಾಬಾದ್ ಜಿಲ್ಲೆಗಳ ಗಡಿಯಲ್ಲಿ ನಡೆದಿದೆ.

ಇಲ್ಲಿನ ದುಮ್ರಿ ನಲ್ಲಾ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡು ಈ ಘಟನೆ ನಡೆದಿದೆ. ಪಾಟ್ನಾದಿಂದ 172 ಕಿ.ಮೀ. ದೂರದಲ್ಲಿರುವ ಅರಣ್ಯ ಪ್ರದೇಶದಲ್ಲಿ ನಕ್ಸಲರಿಗಾಗಿ ಸಿಆರ್​ಪಿಎಫ್ ಪಡೆ ಶೋಧ ಕಾರ್ಯ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ನಕ್ಸಲರು ಸುಮಾರು 21 ಸುಧಾರಿತ ಸ್ಫೋಟಕಗಳನ್ನು ಸ್ಪೋಟಿಸಿದ್ದಾರೆ, ಇದರಿಂದಾಗಿ 10 ಕಮಾಂಡೋಗಳು ಮೃತಪಟ್ಟಿದ್ದಾರೆ. ನಂತರ ನಡೆದ ಗುಂಡಿನ ಚಕಮಕಿಯಲ್ಲಿ 4 ನಕ್ಸಲರು ಸಾವನ್ನಪ್ಪಿದ್ದಾರೆ.

ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಕ್ಸಲರ ಶೋಧ ಕಾರ್ಯ ಪ್ರಾರಂಭವಾಗಿತ್ತು. ಇಂದು ಮತ್ತೆ ಹೆಚ್ಚುವರಿ ಪಡೆಗಳೊಂದಿಗೆ ನಕ್ಸಲರ ವಿರುದ್ಧ ಕಾರ್ಯಾಚರಣೆ ಮುಂದುವರೆಸಲಾಗುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited