Untitled Document
Sign Up | Login    
Dynamic website and Portals
  
July 21, 2016

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಕಾರ್ಯಕರ್ತರ ಪ್ರತಿಭಟನೆ

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಕಾರ್ಯಕರ್ತರ ಪ್ರತಿಭಟನೆ

ಲಕ್ನೌ : ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಉತ್ತರ ಪ್ರದೇಶ ಬಿಜಿಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್​ ರನ್ನು ಬಂಧಿಸಬೇಕೆಂದು ಆಗ್ರಹಿಸಿ ಬಿಎಸ್​ಪಿ ಕಾರ್ಯಕರ್ತರು ಲಖ್ನೌದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆಯೂ ದಯಾಶಂಕರ್ ವಿರುದ್ಧ ಘೊಷಣೆ ಕೂಗುತ್ತ ರ‍್ಯಾಲಿ ನಡೆಸಿದ ಬಿಎಸ್​ಪಿ ಕಾರ್ಯಕರ್ತರು ಹಜರತ್​ ಗಂಜ್​ನ ವೃತ್ತದಲ್ಲಿ ಭಾರಿ ಸಂಖ್ಯೆಯಲ್ಲಿ ನೆರೆದಿದ್ದು, ದಯಾಶಂಕರ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಶಣೆಗಳನ್ನು ಕೂಗುತ್ತಿದ್ದಾರೆ.

ಆಕ್ಷೇಪಾರ್ಹ ಹೇಳಿಕೆ ನೀಡಿರುವ ದಯಾಶಂಕರ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಈನಡುವೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದ ಘಟನೆಯೂ ನಡೆದಿದೆ.

ಒಟ್ಟಿನಲ್ಲಿ ಗುಜರಾತ್ ನಲ್ಲಿ ದಲಿತರ ಪ್ರತಿಭಟನೆಯಿಂದಾಗಿ ರಾಜಕೀಯ ಬಿರುಗಾಳಿ ಎಳಲು ಕಾರಣವಾಗಿದ್ದ ಬಿಜೆಪಿ, ಈಗ ಉತ್ತರ ಪ್ರದೇಶದಲ್ಲಿ ಮತ್ತೊಂದು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited