ನವದೆಹಲಿ : ದೇಶದ ಸಂಪೂರ್ಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ದೇಶದ ಶಾಲಾ ಕಾಲೇಜು ವಿದ್ಯಾರ್ಥಿಗಳ ಅತಿ ದೊಡ್ಡ ಕ್ರೀಡಾಕೂಟವಾದ ರಿಲಾಯನ್ಸ್ ಫೌಂಡೇಷನ್ನ ಯುವ ಕ್ರೀಡಾ ಉಪಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆ ಹೆಚ್ಚಿಸುವ ಮೂಲಕ ದೇಶದ ಅಭಿವೃದ್ದಿಗೆ ಕ್ರೀಡೆ ಸಹಕಾರಿಯಾಗಬೇಕು ಎಂದರು.
ಶಕ್ತಿಯುತ ನಾಗರಿಕರಾಗಿ ರಾಷ್ಟ್ರವನ್ನು ಕಟ್ಟಲು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದವರು ಕಿವಿಮಾತು ಹೇಳಿದರು.
ನಂತರ ನಡೆದ ವಿಡಿಯೋ ಕಾನ್ಪರೆನ್ಸ್ನಲ್ಲಿ ಮೋದಿ ಅವರು ದೇಶದ ವಿವಿಧೆಡೆಯಿಂದ ಆಗಮಿಸಿದ್ದ ಕ್ರೀಡಾ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು.ಶಕ್ತಿ, ಜ್ಞಾನ, ಮುಂದಾಳತ್ವ ಮತ್ತು ಸಾಮಾಜಿಕ ಜೀವನಕ್ಕಾಗಿ ಕ್ರೀಡೆಯನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊಳ್ಳಿ ಎಂದು ಅವರು ಮಕ್ಕಳಿಗೆ ಸಲಹೆ ನೀಡಿದರು.