Untitled Document
Sign Up | Login    
Dynamic website and Portals
  
July 28, 2016

ಇಸ್ಲಾಮಾಬಾದ್ ನಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲಿರುವ ರಾಜನಾಥ್ ಸಿಂಗ್

ನವದೆಹಲಿ : ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಗಸ್ಟ್ 3 ರಂದು ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪಾಕಿಸ್ತಾನದ ಇಸ್ಲಾಮಾಬಾದ್​ಗೆ ಭೇಟಿ ನೀಡಲಿದ್ದಾರೆ.

ಆಗಸ್ಟ್‌ 3 ಮತ್ತು 4ರಂದು ಎರಡು ದಿನಗಳ ಕಾಲ ನಡೆಯಲಿರುವ ಸಾರ್ಕ್‌ ಶೃಂಗ ಸಭೆಯಲ್ಲಿ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಭಾರತ-ಪಾಕ್‌ ಸಂಬಂಧಗಳು ತೀವ್ರವಾಗಿ ಹದಗೆಟ್ಟಿರುವ ಈ ಸಂದರ್ಭದಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಈ ವೇಳೆ ಪಾಕ್ ಪ್ರಧಾನಿ ನವಾಜ್ ಷರೀಫ್ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಯಿದೆ. ಪಠಾಣಕೋಟ್ ವಾಯುನೆಲೆ ಮೇಲಿನ ದಾಳಿ ಮತ್ತು ಕಾಶ್ಮೀರ ಹಿಂಸಾಚಾರದಲ್ಲಿ ಮೂಗು ತೂರಿಸಿ ಭಾರತದ ಆಂತರಿಕ ವಿಷಯಗಳಲ್ಲಿ ತಲೆ ಹಾಕುತ್ತಿರುವ ಪಾಕಿಸ್ತಾನಕ್ಕೆ ಈ ಘಟನೆಗಳ ಬಳಿಕ ಕ್ಯಾಬಿನೆಟ್ ದರ್ಜೆ ಸಚಿವರೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited