Untitled Document
Sign Up | Login    
Dynamic website and Portals
  
July 30, 2016

ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು : ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ, ಗದಗ, ಬೆಳಗಾವಿ, ವಿಜಯಪುರದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ದೊರೆತಿದೆ. ಈ ಮಧ್ಯೆ ಬಸ್ , ಆಟೋ ಸಂಚಾರ ಸಂಪುರ್ಣ ಸ್ಥಗಿತಗೊಂಡಿದ್ದು, ವ್ಯಾಪಾ-ವಹಿವಾಟು ಕೂಡ ಬಂದ್ ಆಗಿದೆ.

ಕನ್ನಡಪರ ಸಂಘಟನೆ ಸದಸ್ಯರುಗಳು ಜನಪ್ರತಿನಿಧಿಗಳ ಮನೆ ಮುಂದೆ ಧರಣಿ ನಡೆಸುತ್ತಿದ್ದಾರೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಿಗೆ ಮುತ್ತಿಗೆ ಹಾಕಿದ ಕನ್ನಡಪರ ಸಂಘಟನೆ ಕಾರ್ಯಕರ್ತರು ರೈಲು ತಡೆದು ಪ್ರತಿಭಟನೆ ನಡೆಸಿದರು. ಬೈಕ್ ರ‍್ಯಾಲಿ ನಡೆಸಿರುವ ಸಂಘಟನೆಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಹುಬ್ಬಳ್ಳಿಯಲ್ಲಿ ರೈತ ಮುಖಂಡರು ಹಾಗೂ ಕನ್ನಡಪರ ಸಂಘಟನೆಗಳು ಮಾರುಕಟ್ಟೆ ಪ್ರದೇಶದಲ್ಲಿ ಘೋಷಣೆ ಕೂಗುತ್ತ ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದಾರೆ. ಚೆನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ನವಲಗುಂದ ತಾಲೂಕಿನಲ್ಲಿ ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ವಿವೇಕಾನಂದ ವೃತ್ತದಲ್ಲಿ ಅಣುಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು.

ದಾವಣಗೆರೆಯಲ್ಲಿ ಬೀದಿಗಿಳಿದ ರೈತರು ನಗರದ ಜಯದೇವ, ಗಾಂಧಿ ವೃತ್ತದಲ್ಲಿ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ಜಯದೇವ ವೃತ್ತದವರೆಗೆ ಗೋವಾ ಸಿ ಎಂ ಪರ್ಸೆಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಣಕು ಶವಯಾತ್ರೆ ನಡೆಸಿದರು.

ತುಮಕೂರಿನ ಟೌನ್​ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಕನ್ನಡಪರ ಸಂಘಟನೆಗಳು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಿಪಡಿಸಿದ್ದಾರೆ. ಮಂಡ್ಯದ ಹೊಸಹಳ್ಳಿ ವೃತ್ತದಲ್ಲಿ ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ ನಡೆಸಿದ ಕರವೇ ಕಾರ್ಯಕರ್ತರು ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited