Untitled Document
Sign Up | Login    
Dynamic website and Portals
  
August 4, 2016

ಲೆಫ್ಟಿನೆಂಟ್ ಗವರ್ನರವರೇ ದೆಹಲಿ ಆಡಳಿತಾತ್ಮಕ ಮುಖ್ಯಸ್ಥರುಃ ದೆಹಲಿ ಹೈಕೋರ್ಟ್

ನವದೆಹಲಿ : ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಮುಖ್ಯಸ್ಥರು. ಲೆಫ್ಟಿನೆಂಟ್ ಗವರ್ನರ್ ಮೂಲಕವೇ ಎಲ್ಲಾ ನಿರ್ಧಾರ ಅಂತಿಮವಾಗಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಮುಖಭಂಗವಾದಂತಾಗಿದೆ.

ದೆಹಲಿಯ ಆಡಳಿತದ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಅಧಿಕಾರ ಇಲ್ಲ. ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್, ಲೆಫ್ಟಿನೆಂಟ್ ಗವರ್ನರ್ ಅವರು ದೆಹಲಿಯ ಸಚಿವರ ಸಲಹೆಯಂತೆ ನಡೆದುಕೊಳ್ಳಲು ಸಾಧ್ಯವಿಲ್ಲ, ಲೆಫ್ಟಿನೆಂಟ್ ಗವರ್ನರ್ ಮೂಲಕವೇ ಎಲ್ಲಾ ನಿರ್ಧಾರ ಅಂತಿಮವಾಗಬೇಕು ಎಂದು ತಿಳಿಸಿದೆ.

ದೆಹಲಿಯಲ್ಲಿ ಪೊಲೀಸ್, ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ. ದೆಹಲಿಗೆ ಗವರ್ನರ್ ಅವರೇ ಆಡಳಿತಾತ್ಮಕ ಮುಖ್ಯಸ್ಥರು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಲೆಫ್ಟಿನೆಂಟ್ ಗವರ್ನರ್ ಅವರ ಅಂಕಿತ ಇಲ್ಲದೆಯೇ ದೆಹಲಿಯ ಸಚಿವರು ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ, ಅವರ ಅಧಿಕಾರವನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಖಡಕ್ ಆಗಿ ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ಅವರೇ ದೆಹಲಿ ಮುಖ್ಯಸ್ಥರು. ಅವರ ಅಧಿಕಾರವನ್ನು ಪ್ರಶ್ನಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited