Untitled Document
Sign Up | Login    
Dynamic website and Portals
  
August 5, 2016

ಅಸ್ಸಾಂನಲ್ಲಿ ಉಗ್ರರ ದಾಳಿ: 14 ಜನ ಬಲಿ

ಗುವಾಹಟಿ : ಅಸ್ಸಾಂನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ 14 ಮಂದಿ ನಾಗರಿಕರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.

ಅಸ್ಸಾಂನ ಕೋಕ್ರಾಝರ್ ನ ಜನನಿಬಿಡ ಮಾರ್ಕೆಟ್ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆ ಈ ಘಟನೆ ನಡೆದಿದ್ದು, ನಾಲ್ವರು ಭಯೋತ್ಪಾದಕರು ಜನರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 14 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಕ್ರಾಝರ್ ಮಾರುಕಟ್ಟೆಗೆ ಆಟೋರಿಕ್ಷಾದಲ್ಲಿ ಬಂದಿಳಿದ ಉಗ್ರರು ಒಮ್ಮಿಂದೊಮ್ಮೆಲೇ ದಾಳಿ ನಡೆಸಿದ್ದಾರೆ. ಉಗ್ರರು ನಡೆಸಿದ ಗುಂಡಿನ ದಾಳಿಗೆ ಮಾರುಕಟ್ಟೆಯಲ್ಲಿನ ಮೂರಕ್ಕು ಹೆಚ್ಚು ಅಂಗಡಿಗಳು ಧ್ವಂಸಗೊಮ್ಡಿದ್ದು, ಬೆಂಕಿಗಾಹುತಿಯಾಗಿವೆ.

ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಉಗ್ರನೊಬ್ಬ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ದಾಳಿಯಲ್ಲಿ ಸಾವನ್ನಪ್ಪಿರುವ ಉಗ್ರನ ಬಳಿ ಇದ್ದ ಎಕೆ 47 ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸುಮಾರು 20 ನಿಮಿಷಗಳ ಕಾಲ ನಿರಂತರವಾಗಿ ಗುಂಡಿನ ಚಕಮಕಿ ನಡೆದಿತ್ತು ಎಂದು ವರದಿ ವಿವರಿಸಿದೆ. ಘಟನಾ ಸ್ಥಳಕ್ಕೆ ಅರೆಸೇನಾ ಪಡೆ ತೆರಳಿದ್ದು, ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ ಯಾವುದೇ ಉಗ್ರಗಾಮಿ ಸಂಘಟನೆ ದಾಳಿಯ ಹೊಣೆಹೊತ್ತುಕೊಂಡಿಲ್ಲ. ಆದರೆ ದಾಳಿ ನಡೆಸಿದವರು ಬೋಡೋ ಸಂಘಟನೆಗೆ ಸೇರಿದವರೆಂದು ಶಂಕಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited