Untitled Document
Sign Up | Login    
Dynamic website and Portals
  
August 6, 2016

ವಿಜಯ್ ರೂಪಾನಿಯಿಂದ ರಾಜ್ಯಪಾಲರ ಭೇಟಿ: ನಾಳೆ ಪ್ರಮಾಣ ವಚನ ಸ್ವೀಕಾರ

ವಿಜಯ್ ರೂಪಾನಿಯಿಂದ ರಾಜ್ಯಪಾಲರ ಭೇಟಿ: ನಾಳೆ ಪ್ರಮಾಣ ವಚನ ಸ್ವೀಕಾರ

ಅಹಮದಾಬಾದ್ : ಗುಜರಾತ್ ನ ನಿಯೋಜಿತ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ರಾಜ್ಯಪಾಲ ಒ.ಪಿ.ಕೊಹ್ಲಿ ಅವರನ್ನು ಭೇಟಿ ಮಾಡಿದ್ದು, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್ ರೂಪಾನಿ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಆರೋಗ್ಯ ಸಚಿವ ನಿತಿನ್ ಪಟೇಲ್ ಸಾಥ್ ನೀಡಿದರು.

ರೂಪಾನಿ ರಾಜ್ಯಪಾಲರ ಭೆಟಿಯ ಬಳಿಕ ಮಾತನಾಡಿದ ಗುಜರಾತ್ ಬಿಜೆಪಿ ರಾಜ್ಯ ಉಸ್ತುವಾರಿ ದಿನೇಶ್ ಶರ್ಮಾ, ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಹಾಗು ಉಪಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ಆಯ್ಕೆಗೆ ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ. ನಾಳೆ ಮಧ್ಯಾಹ್ನ 12:40ಕ್ಕೆ ವಿಜಯ್ ರೂಪಾನಿ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ನಡೆದ ಗುಜರಾತ್ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರೂಪಾನಿ ಅವರನ್ನು ಗುಜರಾತ್ ನೂತನ ಮಿಖ್ಯಮಂತ್ರಿಯನ್ನಾಗಿ ಆಯ್ಕೆಮಾಡಲಾಗಿತ್ತು.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಆನಂದಿ ಬೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದ ರೂಪಾನಿ ಅವರು 2014ರಲ್ಲಿ ಕರ್ನಾಟಕ ರಾಜ್ಯಪಾಲರಾಗಿ ನೇಮಕಗೊಂಡ ವಜುಭಾಯಿ ವಾಲಾ ಅವರಿಂದ ತೆರವಾದ ರಾಜಕೋಟ್ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

1956ರ ಆಗಸ್ಟ್ 2ರಂದು ಮ್ಯಾನ್ಮಾರ್​ನ ರಂಗೂನ್​ನಲ್ಲಿ ಜನಿಸಿದ ರೂಪಾನಿ ಬಿ.ಎ.ಎಲ್.ಎಲ್.ಬಿ ಪದವೀಧರರು. ಜೈನ (ಬನಿಯಾ) ಸಮುದಾಯದ ಇವರು ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ಎಬಿವಿಪಿ ಸಂಪರ್ಕಕ್ಕೆ ಬಂದು ಆರ್​ಎಸ್​ಎಸ್​ಗೂ ನಿಕಟವಾದರು. 2006ರಿಂದ 2012ರವರೆಗೆ ರಾಜ್ಯಸಭೆ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದವರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited