Untitled Document
Sign Up | Login    
Dynamic website and Portals
  
August 7, 2016

ಪ್ರವಾಸಿ ಭಾರತೀಯ ದಿವಸ್: ರಾಷ್ಟ್ರಪತಿ, ಪ್ರಧಾನಿ ಮೋದಿ ಆಗಮನ

ಪ್ರವಾಸಿ ಭಾರತೀಯ ದಿವಸ್: ರಾಷ್ಟ್ರಪತಿ, ಪ್ರಧಾನಿ ಮೋದಿ ಆಗಮನ

ಬೆಂಗಳೂರು : ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆ ಸಹಯೋಗದಲ್ಲಿ 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್‌ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ ಹಾಗೂ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಜನವರಿ 7ರಿಂದ 9ರವರೆಗೆ ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಪ್ರವಾಸಿ ಭಾರತೀಯ ದಿವಸ್‌ ನಡೆಯಲಿದ್ದು, ಪ್ರಧಾನಿ, ರಾಷ್ಟ್ರಪತಿ, ವಿದೇಶಾಂಗ ಸಚಿವರು, ಕರ್ನಾಟಕ ಸೇರಿ ದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ಜತೆಗೆ ಸುಮಾರು ಎರಡೂವರೆ ಸಾವಿರ ಅನಿವಾಸಿ ಭಾರತೀಯರೂ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಾಜ್ಯದ ಪ್ರವಾಸೋದ್ಯಮ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ ಹಾಗೂ ಕೈಗಾರಿಕಾ ಅವಕಾಶಗಳನ್ನು ಶೋಕೇಸ್‌ ಮಾಡಲಾಗುತ್ತದೆ ಎಂದು ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

2017ರ ಜ.7ರಿಂದ ಆರಂಭವಾಗುವ ಪ್ರವಾಸಿ ಭಾರತೀಯ ದಿವಸ್‌ನಲ್ಲಿ ಮೊದಲ ದಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಪಾಲಿಗೊಳ್ಳಲಿದ್ದಾರೆ. ಎರಡನೇ ದಿನವಾದ ಜ. 8ರಂದು ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್‌, ವಿಜಯ್‌ ಗೋಯೆಲ್‌ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಜ.9ರಂದು ಸಂಜೆ 30 ಪ್ರವಾಸಿ ಭಾರತೀಯರಿಗೆ ಪ್ರಶಸ್ತಿ ವಿತರಣೆ ನಡೆಯಲಿದ್ದು, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ದೇಶಪಾಂಡೆ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited