Untitled Document
Sign Up | Login    
Dynamic website and Portals
  
August 7, 2016

ನಕಲಿ ಗೋರಕ್ಷಕರ ವಿರುದ್ಧ ಪ್ರಧಾನಿ ವಾಗ್ಧಾಳಿ

ನಕಲಿ ಗೋರಕ್ಷಕರ ವಿರುದ್ಧ ಪ್ರಧಾನಿ ವಾಗ್ಧಾಳಿ

ನವದೆಹಲಿ : ನಕಲಿ ಸ್ವಯಂ ಘೋಷಿತ ಗೋರಕ್ಷಕರು ಹಾಗೂ ಗೋ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ.

ಮೈ ಗವ್‌ ವೆಬ್‌ಸೈಟ್‌ ಹಾಗೂ ಆ್ಯಪ್‌ಗೆ 2 ವರ್ಷ ವರ್ಷ ಸಂದ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿ ನಡೆದ ಟೌನ್‌ಹಾಲ್‌ ಮಾದರಿ ಕ್ರಮ&id=19722'>ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಕಲಿ ಗೋರಕ್ಷಕರ ವಿರುದ್ಧ ವಾಗ್ಧಾಳಿ ನಡೆಸಿದರು.

ಸ್ವಯಂಘೋಷಿತ ಗೋರಕ್ಷಕರು ರಾತ್ರಿ ಅಪರಾಧ ಕೃತ್ಯಗಳಲ್ಲಿ ತೊಡಗಿರುತ್ತಾರೆ. ಬೆಳಗ್ಗೆ ಗೋ ರಕ್ಷಣೆಗೆ ಮುಖವಾಡ ಹೊತ್ತು ಸೇವೆ ಮಾಡುತ್ತಾರೆ. ಸೇವೆ ಮಾಡುವುದು ಈ ರೀತಿಯಲ್ಲ. ಹತ್ಯೆಗಳಿಂದ ಗೋವುಗಳು ಹೆಚ್ಚಾಗಿ ಸಾವನ್ನಪ್ಪುವುದಿಲ್ಲ. ಆದರೆ, ಅವುಗಳು ಬಹುತೇಕವಾಗಿ ಪ್ಲಾಸ್ಟಿಕ್‌ಗಳನ್ನು ತಿಂದು ಮೃತಪಡುತ್ತಿವೆ. ಜನರು ಪ್ಲಾಸ್ಟಿಕ್‌ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ಗೋರಕ್ಷಕರು ತಡೆಯುವ ಕೆಲಸ ಮಾಡಿದರೇ ಅದೇ ನಿಜವಾದ ಸೇವೆ ಆಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ನಾನೊಮ್ಮೆ ಗೋವುಗಳಿಗಾಗಿ ಆರೋಗ್ಯ ಶಿಬಿರ ಆಯೋಜಿಸಿದ್ದಾಗ ಆಕಳೊಂದರ ಹೊಟ್ಟೆಯಲ್ಲಿ 2 ಬಕೆಟ್‌ ಪ್ಲಾಸ್ಟಿಕ್‌ ತ್ಯಾಜ್ಯ ಪತ್ತೆಯಾಗಿತ್ತು ಎಂದವರು ಕಳವಳ ವ್ಯಕ್ತಪಡಿಸಿದರು.

ದೇಶದಲ್ಲಿ ಗೋ ಮುಖವಾಡ ಹೊತ್ತಿರುವ ರಕ್ಷಕರಲ್ಲಿ ಶೇ.80 ಮಂದಿ ಬಹುತೇಕವಾಗಿ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಇಂತಹ ನಕಲಿ ಗೋರಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ರಾಜ್ಯ ಸರ್ಕಾರಗಳಿಗೆ ಕರೆ ನಿಡಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited