Untitled Document
Sign Up | Login    
Dynamic website and Portals
  
August 8, 2016

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಬೆಂಗಳೂರು : ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯದ ಹಿತವೇ ಪರಮೋಚ್ಛ ಎಂದು ನಿರ್ಧರಿಸಲಾಗಿದ್ದು, ಈ ವಿಚಾರದಲ್ಲಿ ರಾಜಕೀಯ ನಡೆ ಬೇಡ ಎಂದು ತೀರ್ಮಾನಿಸಿ ಕಾನೂನಾತ್ಮಕ ಹೆಜ್ಜೆಗೆ ಒಕ್ಕೊರಲ ಒಲವು ವ್ಯಕ್ತವಾಯಿತು.

ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೆಡೆ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಮತ್ತೊಂದೆಡೆ ಅಂತರ್ಜಲ ಮಟ್ಟ ಕುಸಿದಿದೆ. ಮಗದೊಂದೆಡೆ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಒಳಗೊಂಡಂತೆ ನಾಲ್ಕು ಪ್ರಮುಖ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ, ಮಾನವೀಯತೆಯ ದೃಷ್ಠಿಯಿಂದ 7.56 ಟಿ ಎಂ ಸಿ ನೀರು ದೊರಕಿಸಿಕೊಡುವಂತೆ ರಾಜ್ಯ ಸರ್ಕಾರ ಮಾಡಿದ ಮನವಿಯನ್ನು ತಿರಸ್ಕರಿಸಿ ನ್ಯಾಯಾಧಿಕರಣವು ನೀಡಿರುವ ಮಧ್ಯಂತರ ತೀರ್ಪು ಎಲ್ಲರಲ್ಲೂ ಆತಂಕ ಮೂಡಿಸಿದೆ ಎಂದರು.

ನ್ಯಾಯಾಧಿಕರಣಮಧ್ಯಂತರ ತೀರ್ಪು ಪ್ರಕಟಗೊಂಡ ನಂತರ ಜಲ ಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ್ ಹಾಗೂ ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಅವರು ನವದೆಹಲಿಗೆ ತೆರಳಿ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರೊಂದಿಗೆ ಅರ್ಥ ಪೂರ್ಣ ಹಾಗೂ ಮುಕ್ತ ಚರ್ಚೆ ನಡೆಸಿದ್ದಾರೆ. ಇದೀಗ ಸರ್ಕಾರದ ಮುಂದೆ ಎರಡು ಆಯ್ಕೆಗಳಿವೆ. ಅಂತಾರಾಜ್ಯ ಜಲ ವಿವಾದ ಕಾಯಿದೆ-1956 ರ ಪರಿಚ್ಛೇಧ 5 ( 3 ) ಅನ್ವಯ ತೀರ್ಪು ಕುರಿತಂತೆ ನ್ಯಾಯಾಧಿಕರಣದಲ್ಲೇ ಸ್ಪಷ್ಟೀಕರಣ ಕೋರುವುದು ಅಥವಾ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀಪನ್ನು ಪ್ರಶ್ನಿಸಿ ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದು. ಈ ಸನ್ನಿವೇಶದಲ್ಲಿ ಫಾಲಿ ಎಸ್ ನಾರಿಮನ್ ನೇತೃತ್ವದ ರಾಜ್ಯ ಕಾನೂನು ತಂಡದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು, ಮುಂದಿನ ಹಾದಿಯನ್ನು ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ತನ್ನ ಬೆಂಬಲ ವ್ಯಕ್ತಪಡಿಸಿವೆ ಎಂದರು.

ರಾಜ್ಯದ ಪರ ವಕೀಲ ಫಾಲಿ ಎಸ್ ನಾರಿಮನ್ ಅವರೊಂದಿಗೆ ಆಗಸ್ಟ್ 16 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಿ, ಅಂದು ಹೊರ ಹೊಮ್ಮುವ ಅಭಿಪ್ರಾಯದ ಆಧಾರದ ಮೇರೆಗೆ ಮುಂದಿನ ಕಾನೂನು ಹೆಜ್ಜೆಯನ್ನು ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited