Untitled Document
Sign Up | Login    
Dynamic website and Portals
  
August 12, 2016

ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು-ಕಾಶ್ಮೀರದ ಅವಿಭಾಜ್ಯ ಅಂಗ: ಪ್ರಧಾನಿ

Narendra Modi (File Pic) Narendra Modi (File Pic)

ನವದೆಹಲಿ : ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು-ಕಾಶ್ಮೀರದ ಅವಿಭಾಜ್ಯ ಅಂಗವಾಗಿದ್ದು, ರಾಷ್ಟ್ರದ ಭದ್ರತೆ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಉಗ್ರ ಬುರ್ಹಾನ್ ವನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಅವಿಭಾಜ್ಯ ಅಂಗ. ಕಾಶ್ಮೀರ ಜನತೆಯ ವಿಶ್ವಾಸವನ್ನು ನಾವು ಗಳಿಸಿಕೊಳ್ಳಬೇಕು ಎಂದು ಹೇಳಿದರು.

ಕಾಶ್ಮೀರದ ಇತ್ತೀಚಿನ ಬೆಳವಣಿಗೆಗಳಿಂದಾಗಿ ತುಂಬಾ ನೋವಾಗಿದೆ. ಕಾಶ್ಮೀರದ ಪ್ರತಿಯೊಬ್ಬ ಪ್ರಜೆಯೂ ಶಾಂತಿ ನೆಲೆಸಬೇಕು ಎಂದು ಪ್ರಾರ್ಥಿಸುತ್ತಾನೆ. ಹಾಗೇ ಭಾರತದ ಪ್ರತಿ ವ್ಯಕ್ತಿ ಕಾಶ್ಮೀರದಲ್ಲಿ ಶಾಂತಿ ನೆಲೆಸೆಂದು ಬಯಸುತ್ತಿದ್ದು, ನಾನೂ ಕೂಡ ಬಯಸುತ್ತೇನೆ. ಕಾಶ್ಮೀರದ ಜನತೆ ಪ್ರಜಾಪ್ರಭುತ್ವದ ಮೇಲೆ ಭರವಸೆಯನ್ನಿಟ್ಟಿದ್ದಾರೆ. ಹೀಗಾಗಿ ಸರ್ಕಾರ ರಕ್ಷಣೆಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಶ್ಮೀರ ಜನತೆ ಪ್ರತ್ಯೇಕತಾವಾದಿಗಳು ಮತ್ತು ಉಗ್ರ ಸಂಘಟನೆಗಳ ಬೆದರಿಕೆಗಳ ನಡುವೆಯೂ ತಮ್ಮ ನಂಬಿಕೆ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿದೆ ಎಂದರು.

ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಬಲೂಚಿಸ್ತಾನಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಜಗತ್ತಿಗೆ ಪಾಕಿಸ್ತಾನ ಉತ್ತರ ನೀಡಬೇಕಾದ ಕಾಲ ಸನ್ನಿಹಿತವಾಗಿದೆ ಎಂದು ಪ್ರಧಾನಿ, ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತಿರುವ ಎಲ್ಲ ಪಕ್ಷಗಳಿಗೂ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited