Untitled Document
Sign Up | Login    
Dynamic website and Portals
  
August 15, 2016

ಸಿಆರ್​ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ : ಸ್ವಾತಂತ್ರ್ಯ ದಿನಾಚರಣೆಯದಿನದಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸಿಆರ್​ಪಿಎಫ್ ಕ್ಯಾಂಪ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನೌಹಟ್ಟಾ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಯೋಧರು, ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಘಟನೆ ವೇಳೆ ಓರ್ವ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ ತಿಳಿದುಬಂದಿದೆ.

ಸೇನಾ ಸಿಬ್ಬಂದಿಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು ಇಂದು ಬೆಳಿಗ್ಗೆ ಗುಂಡಿನ ದಾಳಿ ನಡೆಸುತ್ತಿದ್ದರು. ಸ್ಥಳದಲ್ಲಿ ಇನ್ನು ಎರಡರಿಂದ ಮೂವರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೇನಾ ಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ.

ಇದೇ ವೇಳೆ ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಉರಿವಲಯದಲ್ಲೂ ಅತಿಕ್ರಮಣಕ್ಕೆ ಯತ್ನಿಸಿದ ಇಬ್ಬರು ಉಗ್ರರನ್ನು ಸೇನಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ 5 ಮಂದಿ ಸಿಆರ್​ಪಿಎಫ್ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

 

 

Share this page : 
 

Table 'bangalorewaves.bv_news_comments' doesn't exist