Untitled Document
Sign Up | Login    
Dynamic website and Portals
  
August 16, 2016

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ; ಐದು ಜನರ ಸಾವು: ಹಲವರಿಗೆ ಗಾಯ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ; ಐದು ಜನರ ಸಾವು: ಹಲವರಿಗೆ ಗಾಯ

ನವದೆಹಲಿ : ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಬುಡಗಾಂವ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ 5 ನಾಗರಿಕರು ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಇಲ್ಲಿನ ಬುಡಗಾಂವ್ ಜಿಲ್ಲೆಯ ಮಾಗಾಂ ಪ್ರದೇಶದಲ್ಲಿ ಪ್ರತಿಭಟನೆ ಆರಂಭಿಸಿದ ಪ್ರತ್ಯೇಕತಾವಾದಿಗಳು ಭದ್ರತಾ ಪಡೆ ಮೇಲೆ ಕಲ್ಲು ತೂರಾಟ ಆರಂಭಿಸಿದರು. ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ 5 ಮಂದಿ ಸಾವನ್ನಪ್ಪಿದ್ದಾರೆ.

ಮಾಗಾಂ ಪ್ರದೇಶದಲ್ಲಿ ಸೇನಾ ಸಿಬ್ಬಂದಿಗಳತ್ತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಸೈನಿಕರು ಅವರನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರತಿಭಟನಾಕಾರರು ಸೇನಾ ಸಿಬ್ಬಂದಿಗಳ ಮೇಲೆ ಕಲ್ಲೂ ತೂರಾಟ ಹೆಚ್ಚಿಸಿದಾಗ ಅನಿವಾರ್ಯವಾಗಿ ಗುಂಡು ಹಾರಿಸಲಾಗಿದೆ ಎಂದು ಹಿರಿಯ ಸೇನಾಧಿಕಾರಿ ತಿಳಿಸಿದ್ದಾರೆ.

ಪ್ರಕರಣದಲ್ಲಿ ಈ ವರೆಗೂ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸೇನಾ ಸಿಬ್ಬಂದಿಗಳೇ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಹಿಜ್ಬುಲ್ ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದ ಪ್ರತ್ಯೇಕತಾವಾದಿಗಳು ಜುಲೈ 8 ರಿಂದ ಉಗ್ರ ಪ್ರತಿಭಟನೆ ನಡೆಸುತ್ತಿದ್ದು, ಸತತ 38 ದಿನದಿಂದ ಕಾಶ್ಮೀರದ ಹಲವು ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಈ ವರೆಗೂ 62ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 5 ಸಾವಿರಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited