Untitled Document
Sign Up | Login    
Dynamic website and Portals
  
August 18, 2016

ರಿಯೋ ಒಲಂಪಿಕ್ಸ್: ಭಾರತಕ್ಕೆ ಚೊಚ್ಚಲ ಪದಕ ತಂದುಕೊಟ್ಟ ಕುಸ್ತಿಪಟು ಸಾಕ್ಷಿ ಮಲಿಕ್

ರಿಯೋ ಒಲಂಪಿಕ್ಸ್: ಭಾರತಕ್ಕೆ ಚೊಚ್ಚಲ ಪದಕ ತಂದುಕೊಟ್ಟ ಕುಸ್ತಿಪಟು ಸಾಕ್ಷಿ ಮಲಿಕ್

ರಿಯೋ ಡಿ ಜನೈರೋ : ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕುಸ್ತಿಪಟು ಸಾಕ್ಷಿ ಮಲಿಕ್ ಭಾರತಕ್ಕೆ ಮೊದಲ ಪದಕ ತಂದುಕೊಡುವ ಮೂಲಕ ನೂತನ ಇತಿಹಾಸ ನಿರ್ಮಿಸಿದ್ದಾರೆ.

58 ಕೆಜಿ ಫ್ರೀ ಸ್ಟೈಲ್ ಮಹಿಳೆಯರ ವಿಭಾಗದಲ್ಲಿ ಸಾಕ್ಷಿ ಮಲಿಕ್ ಕಿರ್ಗಿಸ್ತಾನದ ಐಸಿಲೂ ಟೈನೀಬೆಕೋವಾ ವಿರುದ್ಧ ಗೆಲ್ಲುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಮೊದಲ ಹಂತದಲ್ಲಿ 0-5 ಅಂಕಗಳಿಂದ ಹಿನ್ನಡೆ ಅನುಭವಿಸಿದ್ದ ಸಾಕ್ಷಿ, ಎರಡನೇ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿ 8-5 ಅಂತರದ ಗೆಲವು ಸಾಧಿಸಿದರು.

ಸಾಕ್ಷಿ ಕ್ವಾರ್ಟರ್ ಫೈನಲ್​ನಲ್ಲಿ ಫೈನಲ್ ಪ್ರವೇಶಿಸಿದ್ದ ಕೊಬ್ಲೊವಾ ಝೊಲೊಬೋವ ವಿರುದ್ಧ ಸೋಲು ಕಂಡಿದ್ದರಿಂದ ಅವರಿಗೆ ಹೆಚ್ಚುವರಿ ಅವಕಾಶ ಆಧಾರದ ಮೇಲೆ ಕಂಚಿನ ಪದಕಕ್ಕಾಗಿ ಹೋರಾಡುವ ಮತ್ತೊಂದು ಅವಕಾಶ ದೊರಕಿತು. ಈ ಅವಕಾಶದಲ್ಲಿ ಕೆಚ್ಚೆದೆಯ ಪ್ರದರ್ಶನ ನೀಡಿದ ಸಾಕ್ಷಿ ಕಡೆಗೂ ಕಂಚಿನ ಪದಕವನ್ನು ಕೊರಳಿಗೇರಿಸಿಕೊಂಡರು. ಕಂಚಿಗಾಗಿ ಎರಡು ಸ್ಪರ್ಧಿಗಳನ್ನು ಎದುರಿಸಿದ ಸಾಕ್ಷಿ ಮಾಲಿಕ್, ಕರ್ಗಿಸ್ತಾನದ ಎದುರಾಳಿಗೂ ಮೊದಲು ಮಂಗೋಲಿಯಾದ ಜಾಕ್ರೂನ್​ರನ್ನು 10-3ರಿಂದ ಸೋಲಿಸಿದರು. ಅದೇ ಚಾರ್ಮಿ​ನಲ್ಲಿ ಕಣಕ್ಕಿಳಿದ ಸಾಕ್ಷಿ ಪ್ರಬಲ ಸ್ಪರ್ಧಿ ಕಿರ್ಗಿಸ್ತಾನದ ಐಸುಲು ಟಿನಿಬೇಕೋವಾರನ್ನು ಸೋಲಿಸಿ ಪದಕ ತಮ್ಮದಾಗಿಸಿಕೊಂಡರು.

ಹರಿಯಾಣದ ಸಾಕ್ಷಿ ಮಲಿಕ್ ಈ ಪದಕ ಗೆಲ್ಲುವ ಮೂಲಕ ಹೊಸದೊಂದು ಇತಿಹಾಸ ನಿರ್ಮಿಸಿದ್ದಾರೆ. ವನಿತೆಯರ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಚೊಚ್ಚಲ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟ ಕೀರ್ತಿಗೆ ಸಾಕ್ಷಿ ಭಾಜನರಾಗಿದ್ದಾರೆ. ಸಾಕ್ಷಿಗೆ ದೇಶದ ಮೂಲೆ ಮೂಲೆಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Sports

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.
  • ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ
  • ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited