Untitled Document
Sign Up | Login    
Dynamic website and Portals
  
August 21, 2016

ನಿಗಮ-ಮಂಡಳಿಗಳಿಗೆ ನೇಮಕಾತಿ ಪಟ್ಟಿ ಅಂತಿಮ: ಸಿಎಂ ದೆಹಲಿಗೆ

ಬೆಂಗಳೂರು : ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಪಟ್ಟಿ ಅಂತಿಮಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್‌ ಒಪ್ಪಿಗೆ ಪಡೆಯಲು ಆ.22ರಂದು ದೆಹಲಿಗೆ ತೆರಳಲಿದ್ದಾರೆ.

ಅಂತಿಮಗೊಂಡಿರುವ ಪಟ್ಟಿಯಲ್ಲಿ 20ರಿಂದ 25 ಶಾಸಕರು ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಆದರೆ, ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್‌ ಒಪ್ಪುವುದು ಖಚಿತವಿಲ್ಲದ ಕಾರಣ, ಶಾಸಕರಿಗೆ ಪರ್ಯಾಯ ಹೆಸರುಗಳನ್ನು ಸಿಎಂ ಒಯ್ಯಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಾದೇಶಿಕ ಪ್ರಾತಿನಿಧ್ಯ, ಜಾತಿವಾರು, ಪಕ್ಷನಿಷ್ಠೆ, ಸಾಮಾಜಿಕ ನ್ಯಾಯ ಸಹಿತ ಹಲವು ಅಂಶಗಳನ್ನು ಪರಿಗಣಿಸಿ, ಬಹುತೇಕ ಎಲ್ಲ ನಿಗಮ-ಮಂಡಳಿಗಳಿಗೆ ಸಂಭಾವ್ಯರ ಪಟ್ಟಿ ಸಿದ್ಧಪಡಿಸಲಾಗಿದೆ. ಆ. 24ರೊಳಗೆ ಅಂತಿಮ ಪಟ್ಟಿ ಬಹುತೇಕ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಈ ನಡುವೆ ನಿಗಮ-ಮಂಡಳಿಗಳಿಗೆ ಅಧ್ಯಕ್ಷ- ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ಅಂತಿಮಗೊಳ್ಳುತ್ತಿರುವ ಬೆನ್ನಲ್ಲೇ ಆಕಾಂಕ್ಷಿಗಳಿಂದ ತೀವ್ರ ಲಾಬಿ ಶುರುವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited