Untitled Document
Sign Up | Login    
Dynamic website and Portals
  
August 23, 2016

ಅರವಿಂದ ಜಾದವ್ ವಿರುದ್ಧ ಭೂ ಅಕ್ರಮ ಆರೋಪ: ತನಿಖೆ ನಡೆಸುವಂತೆ ಸಿಎಂ ಸೂಚನೆ

ಅರವಿಂದ ಜಾದವ್ ವಿರುದ್ಧ ಭೂ ಅಕ್ರಮ ಆರೋಪ: ತನಿಖೆ ನಡೆಸುವಂತೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪಗಳ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆರೋಪಗಳ ಬಗ್ಗೆ ಮಾಹಿತಿ ನೀಡುವಂತೆ ನಾನು ಮುಖ್ಯಕಾರ್ಯದರ್ಶಿಯವರಿಗೆ ಸೂಚನೆ ನೀಡಿಲ್ಲ. ಆದರೆ, ಕಂದಾಯ ಇಲಾಖೆಯಿಂದ ವರದಿ ಕೇಳಿದ್ದೇನೆ ಎಂದು ಹೇಳಿದರು.

ಜಾಧವ್ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸಿ ತಾಯಿ ತಾರಾಭಾಯ್ ಹೆಸರಲ್ಲಿ ಸರ್ಕಾರಿ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ಆರ್ ಟಿ ಐ ಕಾರ್ಯಕರ್ತ ಎಸ್.ಭಾಸ್ಕರನ್ ಅವರು ಎಸಿಬಿಗೆ ದೂರು ನೀಡಿದ್ದರು.

ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲೂಕು ಸರ್ಜಾಪುರ ಹೋಬಳಿಯ ರಾಮನಾಯಕನಹಳ್ಳಿಯ ಸರ್ವೇ ಸಂಖ್ಯೆ 29ರಲ್ಲಿ 74 ಎಕರೆ ಸರ್ಕಾರಿ ಜಮೀನಿನ ಪೈಕಿ 8.30 ಎಕರೆ ತಮ್ಮ ತಾಯಿಗೆ ಮಂಜೂರಾಗಿದ್ದು, ಇದಕ್ಕೆ ದಾಖಲೆ ನೀಡುವಂತೆ ಜಿಲ್ಲಾಧಿಕಾರಿಗೆ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್‌ ಸೂಚಿಸಿದ್ದರು. ಈ 8.30 ಎಕರೆ ಸೇರಿ ಒಟ್ಟು 66 ಎಕರೆ ಜಮೀನನ್ನು ವಿವಿಧ ಫ‌ಲಾನುಭವಿಗಳಿಗೆ ನೀಡಲು ಅಕ್ರಮವಾಗಿ ದಾಖಲೆ ಸೃಷ್ಟಿಗೆ ಹಲವು ಹಂತಗಳಲ್ಲಿ ಸಿದ್ಧತೆ ನಡೆಯುತ್ತಿದ್ದಂತೆ, ಸರ್ವೇ ಇಲಾಖೆ ಅಧಿಕಾರಿಯಿಂದ ಈ ಬಗ್ಗೆ ಆಕ್ಷೇಪ ವ್ಯಕ್ತವಾದ ಕಾರಣ ಕೋಪಗೊಂಡ ಮುಖ್ಯ ಕಾರ್ಯದರ್ಶಿ, ಅಧಿಕಾರಿಯನ್ನು ವರ್ಗಾಯಿಸಿದ್ದಾರೆ ಎಂದು ದೂರಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited