Untitled Document
Sign Up | Login    
Dynamic website and Portals
  
August 30, 2016

ಜಲ ವಿವಾದ: ಕರ್ನಾಟಕ-ತಮಿಳುನಾಡಿನಲ್ಲಿ ಕಾವೇರಿದ ಪ್ರತಿಭಟನೆ

ಜಲ ವಿವಾದ: ಕರ್ನಾಟಕ-ತಮಿಳುನಾಡಿನಲ್ಲಿ ಕಾವೇರಿದ ಪ್ರತಿಭಟನೆ

ಬೆಂಗಳೂರು : ತಮಿಳುನಾಡಿನ ಸಾಂಬಾ ಬೆಳೆಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ತಮಿಳುನಾಡು ರೈತರು ಬಂದ್ ಕರೆ ನೀಡಿದ್ದು, ರೈತರು ತಮಿಳುನಾಡಿನಾದ್ಯಂತ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿವೆ.

ಕಾವೇರಿ ನದಿಯಲ್ಲಿ 50 ಟಿಎಂಸಿಗಿಂತಲೂ ನೀರು ಕಡಿಮೆಯಿದ್ದು, ಕರ್ನಾಟಕದ ಜನರಿಗೇ ಕುಡಿಯುವುದಕ್ಕೆ 40 ಟಿಎಂಸಿ ನೀರಿನ ಅಗತ್ಯವಿದೆ. ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿದ್ದು, ನೀರಿನ ಅಭಾವ ಉಂಟಾಗಿದೆ. ಹೀಗಾಗಿ ತಮಿಳುನಾಡಿಗೆ ಪಾಲಿನ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಈ ಹಿಂದಷ್ಟೇ ಸ್ಪಷ್ಟಪಡಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ನಿಲುವನ್ನು ಖಂಡಿಸಿ ಅಲ್ಲಿನ ರೈತರು ತಮಿಳುನಾಡಿನಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ತಮಿಳುನಾಡಿನ ಹಲವು ಪಕ್ಷದ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ವಾಸ್ಕೋ-ಡಿ-ಗಾಮಾ-ವೇಲಾಂಗಣಿ ಎಕ್ಸ್ ಪ್ರೆಸ್ ರೈಲನ್ನು ತಡೆಹಿಡಿದು ಆಕ್ರೋಶ ವ್ಯಕ್ತಪಡಿಸಿವೆ. ತಿರುಚಿ ರೈಲ್ವೆ ನಿಲ್ದಾಣಕ್ಕೆ ಪ್ರವೇಶ ಮಾಡಿ ಪ್ರತಿಭಟನೆ ಮಾಡಲು ಪ್ರಯತ್ನಿಸಿದ್ದ ಸುಮಾರು 200ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎಂಕೆ, ಎಂಎಂಕೆ ಹಾಗೂ ಟಿಎಂಕೆ ಪಕ್ಷದ ಸದಸ್ಯರನ್ನೂ ಕೂಡ ಬಂಧಿಸಲಾಗಿದೆ.

ಈ ನಡುವೆ ಕಾವೇರಿ ನದಿ ನೀರು ಬಿಡುವಂತೆ ಆಗ್ರಹಿಸಿ ತಮಿಳುನಾಡು ರೈತರು ಬಂದ್ ನಡೆಸುತ್ತಿರುವುದನ್ನು ಖಂಡಿಸಿ ಚಾಮರಾಜನಗರ ಹಾಗೂ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಚಾಮರಾಜನಗರ, ಬೆಂಗಳೂರಿನಿಂದ ತಮಿಳುನಾಡಿಗೆ ತೆರಳಬೇಕಾಗಿದ್ದ ಎಲ್ಲಾ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಮೈಸೂರು, ಮಂಡ್ಯ, ಮದ್ದೂರು ಮುಂತಾದೆಡೆ ತಮಿಳುನಾಡಿಗೆ ನೀರು ಹರಿಸಬಾರದೆಂದು ರೈತರು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲದೆ ರೈತರಿಗೆ ಬೆಳೆ ಬೆಳೆಯದಂತೆ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ನೀರಿಗಾಗಿ ತಮಿಳುನಾಡು ಸರ್ಕಾರ ಬಂದ್ ಆಚರಿಸುತ್ತಿದೆ. ರಾಜ್ಯಸರ್ಕಾರ ಸುಪ್ರೀಂಕೋರ್ಟ್ಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited