ಬೆಂಗಳೂರು : ಸರಕು ಮತ್ತು ಸೇವಾ ತೆರಿಗೆ ಕಾಯ್ದೆ (ಜಿಎಸ್ಟಿ) ವಿಧೇಯಕ ಅಂಗೀಕಾರಕ್ಕಾಗಿ ರಾಜ್ಯ ಸರ್ಕಾರ ಸೆ.14ರಂದು ವಿಧಾನಮಂಡಲದ ಒಂದು ದಿನದ ಅಧಿವೇಶನ ನಡೆಸಲು ನಿರ್ಧರಿಸಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಸೆ.14ರಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ಎರಡೂ ಸದನಗಳಲ್ಲಿ ವಿಧೇಯಕಕ್ಕೆ ಒಪ್ಪಿಗೆ ಪಡೆದು ಸದನ ಮುಂದೂಡಲಾಗುವುದು ಎಂದು ತಿಳಿದುಬಂದಿದೆ.
ರಾಜ್ಯಸಭೆಯಲ್ಲಿ ಇತ್ತೀಚೆಗೆ ಜಿಎಸ್ಟಿ ವಿಧೇಯಕಕ್ಕೆ ಅಂಗೀಕಾರ ಪಡೆಯಲಾಗಿತ್ತು. ಇದು ಅನುಷ್ಠಾನಕ್ಕೆ ಬರಬೇಕಾದರೆ 15 ರಾಜ್ಯಗಳ ವಿಧಾನಸಭೆಯಲ್ಲೂ ಅಂಗೀಕಾರವಾಗಬೇಕು.