Untitled Document
Sign Up | Login    
Dynamic website and Portals
  
September 3, 2016

ಭಾರತದ ಗಡಿ ಪ್ರದೇಶದಲ್ಲಿ ಚೀನಾ ಯುದ್ಧ ವಿಮಾನ ಫೈಟರ್ ಜೆಟ್

ಭಾರತದ ಗಡಿ ಪ್ರದೇಶದಲ್ಲಿ ಚೀನಾ ಯುದ್ಧ ವಿಮಾನ ಫೈಟರ್ ಜೆಟ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಚೀನಾ ಟಿಬೆಟ್ ನ ಪ್ರದೇಶದಲ್ಲಿ ಸ್ಟೆಲ್ತ್ ಫೈಟರ್ ಜೆಟ್ ನ್ನು ನಿಯೋಜನೆ ಮಾಡಿರುವುದಾಗಿ ತಿಳಿದುಬಂದಿದೆ.

ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಗಡಿಯಲ್ಲಿ ಸೂಪರ್ಸಾನಿಕ್ ಬ್ರಹ್ಮೋಸ್ ಕ್ಷಿಪಣಿಯನ್ನು ನಿಯೋಜಿಸುವುದಾಗಿ ಭಾರತವು ಹೇಳಿಕೆ ನೀಡಿದ ಹಿಂದೆಯೇ, ಅರುಣಾಚಲ ಪ್ರದೇಶದ ಪೂರ್ವ ಭಾಗದಲ್ಲಿರುವ ಟಿಬೆಟ್ ನ ಸ್ವಾಯತ್ತ ಮುಖಜಭೂಮಿಯ ಎತ್ತರದ ಪ್ರದೇಶದಲ್ಲಿನ ಡಾವೊಚೆಂಗ್ ಯಾಡಿಂಗ್ ಏರ್ಪೋರ್ಟ್ ನಲ್ಲಿ ಚೀನಾದ ಅತ್ಯಂತ ರಹಸ್ಯ ಫೈಟರ್ ಜೆಟ್ ಗೋಚರಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಡಿಫೆನ್ಸ್ ವೆಬ್ ಸೈಟ್ ಗಳಲ್ಲಿ ಸುದ್ದಿ ಪ್ರಕಟವಾಗಿದೆ. ಅರುಣಾಚಲ ಪ್ರದೇಶದಲ್ಲಿ ಬ್ರಹ್ಮೋಸ್ ಕ್ಷಿಪಣಿ ನಿಯೋಜನೆ ಮಾಡಿರುವುದಕ್ಕೆ ಚೀನಾ ಆತಂಕವನ್ನು ತಳ್ಳಿಹಾಕಿರುವ ಭಾರತೀಯ ಸೇನೆ, ನಮ್ಮ ಆತಂಕ ಹಾಗೂ ಭದ್ರತಾ ವಿಷಯಗಳು ಆಂತರಿಕ ವಿಚಾರವಾಗಿದ್ದು, ಇದಕ್ಕಾಗಿ ಕೈಗೊಳ್ಳುವ ಕ್ರಮಗಳಿಂದ ಬೇರೊಬ್ಬರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited