Untitled Document
Sign Up | Login    
Dynamic website and Portals
  
September 5, 2016

ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶ

ನವದೆಹಲಿ : ತಮಿಳುನಾಡಿಗೆ 10 ದಿನಗಳ ಕಾಲ 15,000 ಕ್ಯೂಸೆಕ್ (೧.೨೯ಟಿಎಂಸಿ) ನೀರು ಬಿದಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಯು.ಯು. ಲಲಿತ್ ಅವರ ದ್ವಿಸದಸ್ಯ ಪೀಠ, ಮುಂದಿನ 10 ದಿನಗಳ ಕಾಲ ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿದೆ.

ತಮಿಳುನಾಡು ಹಾಗೂ ಕರ್ನಾಟಕ ಸರ್ಕಾರಗಳ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ನೀರನ್ನು ಜಲಮಾಪನ ಕೇಂದ್ರ ಬಿಳಿಗುಂಡ್ಲುಗೆ ಹರಿಸುವಂತೆ ಕರ್ನಾಟಕಕ್ಕೆ ಹೇಳಿದೆ. ಅಲ್ಲದೇ ಈ ಸಂಬಂಧ ಮೇಲ್ವಿಚಾರಣಾ ಸಮಿತಿಯನ್ನು ನಾಲ್ಕುದಿನಗಳ ಒಳಗಾಗಿ ಸಂಪರ್ಕಿಸುವಂತೆ ತಮಿಳುನಾಡು ಸರ್ಕಾರಕ್ಕೆ ತಿಳಿಸಿದೆ.

ಕಾವೇರಿ ಕಣಿವೆಯಲ್ಲಿ ಮಳೆಕೊರತೆಯಿದಾಗಿ ಯಾವುದೇ ಜಲಾಶಯಗಳು ಭರ್ತಿಯಾಗಿಲ್ಲ. ಎಲ್ಲಾ ಜಲಾಶಯಗಳಲ್ಲಿಯೂ ಸೇರಿ 51 ಟಿ.ಎಂ.ಸಿ. ಅಡಿ ನೀರು ಸಂಗ್ರಹವಿದೆ. ಇದರಲ್ಲಿ 40 ಟಿಎಂಸಿ ಅಡಿ ನೀರು ಕುಡಿಯುವ ಉದ್ದೇಶಕ್ಕೆ ಅತ್ಯಗತ್ಯವಾಗಿ ಬೇಕಾಗಿದೆ. ಸಂಕಷ್ಟಕರ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಪರಿಸ್ಥಿತಿ ಇಲ್ಲ ಎಂದು ಸುಪ್ರೀಂಕೋರ್ಟ್‌ಗೆ ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಮನವರಿಕೆ ಮಾಡಿದರು.

ಉಭಯ ರಾಜ್ಯಗಳ ವಾದ ಆಲಿಸಿದ ಬಳಿಕ ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited