ಮೈಸೂರು : ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಬೇಕು ಎಂಬ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬೆಳಿಗ್ಗೆ 9 ಗಂಟೆಯಿಂದ ನಾಲೆಗಳಿಗೆ ನೀರು ಹರಿಸಲಾರಂಭಿಸಿದೆ.
ಅಣೆಕಟ್ಟೆಯ ಎಲ್ಲ ನಾಲೆಗಳಿಗೆ 4 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ತಮಿಳುನಾಡಿಗೆ 12 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಅಣೆಕಟ್ಟೆಯಿಂದ ಒಟ್ಟು 16 ಸಾವಿರ ಕ್ಯುಸೆಕ್ ನೀರು ಹೊರ ಹೋಗುತ್ತಿದೆ.
ತಮಿಳುನಾಡಿಗೆ ನೀರು ಹರಿಸಿದನ್ನು ವಿರೋಧಿಸಿ ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮಂಡ್ಯದಲ್ಲಿ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೆದ್ದಾರಿ ಮೂಲಕ ಹಾದು ಹೋಗುತ್ತಿದ್ದ ತಮಿಳುನಾಡು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.