Untitled Document
Sign Up | Login    
Dynamic website and Portals
  
September 9, 2016

ಕರ್ನಾಟಕ ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ

ಕರ್ನಾಟಕ ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ

ಬೆಂಗಳೂರು : ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಮುಖ ಮಾರುಕಟ್ಟೆಗಳು ಸ್ಥಬ್ಧವಾಗಿವೆ. ಇನ್ನು ಬಂದ್ ಗೆ ಸರ್ಕಾರಿ ಸಾರಿಗೆ ಸಂಸ್ಥೆ ನೌಕರರು ಬೆಂಬಲ ವ್ಯಕ್ತಪಡಿಸಿರುವುದರಿಂದ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಬ್ದವಾಗಿದೆ. ಬಂದ್ ಹಿನ್ನಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಾರಸ್ಥರು ಬೆಂಬಲ ನೀಡಿದ್ದು, ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿ ಬಂದ್ ಗೆ ತಮ್ಮ ಬೆಂಬಲ ವ್ಯಕ್ಚಪಡಿಸಿದ್ದಾರೆ.

ಇನ್ನು ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಮುಖವಾಗಿ ಬೆಂಗಳೂರು-ಮಂಡ್ಯ- ಮೈಸೂರು ಹೆದ್ದಾರಿ ಬಹುತೇಕ ಸ್ಥಬ್ಧವಾಗಿದ್ದು, ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಬದಲಿ ಮಾರ್ಗದ ಮೊರೆ ಹೋಗುತ್ತಿದ್ದಾರೆ. ಇನ್ನು ಅಲ್ಲಲ್ಲಿ ವಾಹನಗಳಿಗೆ ಬೆಂಕಿ ಹಚ್ಚುವ, ರಸ್ತೆ ತಡೆ ಉಂಟು ಮಾಡಿ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಘಟನೆ ನಡೆದಿದೆ.

ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಸೇರಿದಂತೆ ದಕ್ಷಿಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಬಂದ್ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ದಕ್ಷಿಣ ಕನ್ನವಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಗದಗ, ಕೊಪ್ಪಳ, ದಾವಣಗೆರೆ, ಹಾವೇರಿ, ಬಳ್ಳಾರಿಯಲ್ಲಿ ಬಂದ್ ಆಚರಣೆ ಮಾಡಲಾಗುತ್ತಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಧರಣಿ ನಡೆಸುತ್ತಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited