Untitled Document
Sign Up | Login    
Dynamic website and Portals
  
September 11, 2016

ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರವೇ ಕಾರಣ: ಬಿ.ಎಸ್.ಯಡಿಯೂರಪ್ಪ

B.S.Yeddyurappa (File Pic) B.S.Yeddyurappa (File Pic)

ಮಂಡ್ಯ : ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರವೇ ನೇರ ಕಾರಣ.ಬೆಳೆನಷ್ಟ ಉಂಟಾಗಿರುವ ರೈತರಿಗೆ ಎಕರೆಗೆ ಕೂಡಲೇ 25 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಕವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಸುಪ್ರೀಂಕೋರ್ಟ್ ತೀರ್ಪು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಸರ್ವಪಕ್ಷ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರು ಹರಿಸುವುದಾಗಿ ಹೇಗೆ ಒಪ್ಪಿಕೊಂಡರೋ ತಿಳಿಯುತ್ತಿಲ್ಲ. ಇಂದಿನ ಈ ಪರಿಸ್ಥಿತಿಗೆ ಮುಖ್ಯಮಂತ್ರಿಗಳೇ ನೇರ ಹೊಣೆ ಎಂದು ಆರೋಪಿಸಿದರು.

ತಮಿಳುನಾಡಿಗೆ ನೀರು ಹರಿಸಿ, ರಾಜ್ಯದಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಎಲ್ಲಿಂದ ನೀರು ತರುತ್ತೀರಿ ಎಂದು ಪ್ರಶ್ನಿಸಿರುವ ಬಿಎಸ್ ವೈ, ಇಂದಿನ ಈ ಸ್ಥಿತಿಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ತನವೇ ಕಾರಣ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಕಾವೇರಿ ನೀರಿನ ಸಮಸ್ಯೆ, ರೈತರಿಗಾಗಿರುವ ಬೆಳೆನಷ್ಟ ಹಾಗೂ ಕುಡಿಯುವ ನೀರಿನ ಸಮಸ್ಯೆ ಮುಂತಾಡ ವಿಷಯಗಳನ್ನು ಚರ್ಚಿಸಲು ಎರಡು ದಿನಗಳ ವಿಶೇಷ ವಿಧಾನಮಂಡಲ ಅಧಿವೇಶನವನ್ನು ಕರೆಯಬೇಕೆಂದು ಒತ್ತಾಯಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited