Untitled Document
Sign Up | Login    
Dynamic website and Portals
  
September 13, 2016

ನ್ಯಾಯಾಲಯದ ಆದೇಶ ಪಾಲನೆಗೆ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆರೋಪ ಕೇಳಿಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ಹಿನ್ನಲೆಯಲ್ಲಿ ತುರ್ತು ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದರು. ಕಾವೇರಿ ನದಿ ನೀರು ಹರಿಸುವುದನ್ನು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಮಾಡಿದಂತಾಗುತ್ತದೆ ಈ ಹಿನ್ನಲೆಯಲ್ಲಿ ನೀರು ಬಿಡುವುದರಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಕಾವೇರಿ ವಿವಾದದಲ್ಲಿ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಾಗಿದ್ದು, ಪ್ರಧಾನಿ ಭೇಟಿಗೆ ನಾಳೆ ಸಮಯ ನಿಗದಿಯಾಗಿದೆ. ಕಾವೇರಿ ವಿವಾದದ ಕುರಿತು ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

 

 

Share this page : 
 

Table 'bangalorewaves.bv_news_comments' doesn't exist