ಚೆನ್ನೈ : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆದ ಪ್ರತಿಭಟನೆ ಖಂಡಿಸಿ, ತಮಿಳುನಾಡಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.
ಕರ್ನಾಟಕದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಹಾಗೂ ಜಲ ವಿವಾದಕ್ಕೆ ದೀರ್ಘಾವಧಿ ಪರಿಹಾರ ಹುಡುಕಲು ಆಗ್ರಹಿಸಿ ನಡೆಸುತ್ತಿರುವ ತಮಿಳುನಾಡು ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ, ಮುಂಗಟ್ಟುಗಳು ಎಂದಿನಂತೆ ತೆರೆದಿದೆ.
ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕರ್ನಾಟಕದ ಗಡಿಭಾಗದಲ್ಲಿ ಯಾವುದೇ ಬಸ್ ತಮಿಳುನಾಡಿಗೆ ಸಂಚರಿಸದಂತೆ ತಡೆಹಿಡಿಯಲಾಗಿದೆ.
ತಮಿಳುನಾಡು ಬಂದ್ ಗೆ ಪ್ರಮುಖ ವಿರೋಧ ಪಕ್ಷಗಳಾದ ಡಿಎಂಕೆ, ಕಾಂಗ್ರೆಸ್, ಡಿಎಂಡಿಕೆ, ತಮಿಳು ಮಾನಿಲ ಕಾಂಗ್ರೆಸ್ ಮತ್ತು ಪಿಎಂಕೆ ಬೆಂಬಲ ಸೂಚಿಸಿವೆ.
ಬಂದ್ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಮಿಳುನಾಡು ಸರ್ಕಾರ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸುಮಾರು 50 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾದೆ.