ಶ್ರೀನಗರ : ಜಮ್ಮು-ಕಾಶ್ಮೀರದ ಸೇನಾ ಮುಖ್ಯ ಕಛೇರಿಯ ಮೇಲೆ ಉಗ್ರರು ದಾಳಿ ನಡೆಸಿದ್ದು, 17 ಯೋಧರು ಹುತಾತ್ಮರಾಗಿದ್ದು, 12 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಾರಾಮುಲಾ ಪ್ರದೇಶದ ಉರಿ ಸೆಕ್ಟರ್ ನಲ್ಲಿರುವ ಸೇನಾ ಮುಖ್ಯ ಕಛೇರಿ ಬಳಿ ಉಗ್ರರು ಬೆಳಗಿನ ಜಾವ 5:30 ರ ಸುಮಾರಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ್ದು, ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ 17 ಯೋಧರು ಹುತಾತ್ಮರಾಗಿದ್ದಾರೆ.
ಭಾರತೀಯ ಸೇನಾ ಪಡೆ ಉಗ್ರರ ವಿರುದ್ಧ ಪ್ರತಿ ದಾಳಿ ನಡೆಸಿದ್ದುಮ್ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಗೈಯ್ಯಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಸೇನಾ ಕ್ಯಾಂಪ್ ಸುತ್ತ ಮುತ್ತ ಕಾರ್ಯಾಚರಣೆ ಇನ್ನೂ ಮುಂದುವರೆಸಲಾಗಿದೆ.
ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತುರ್ತು ಸಭೆ ಕರೆದಿದ್ದಾರೆ.