Untitled Document
Sign Up | Login    
Dynamic website and Portals
  
September 21, 2016

ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ

ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ

ನವದೆಹಲಿ : ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್‌ ನ್ನು ವಿಲೀನಗೊಳಿಸುವ ನೂತನ ಸಂಪ್ರದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ.

ಈ ಮೂಲಕ ಪ್ರತ್ಯೇಕ ರೈಲ್ವೆ ಬಜೆಟ್ ಮಂಡಿಸುವ ಒಂಭತ್ತು ದಶಕಗಳ ಹಳೇ ಸಂಪ್ರದಾಯಕ್ಕೆ ತೆರೆಬಿದ್ದಿದೆ. ಕೇಂದ್ರ ವಾರ್ಷಿಕ ಬಜೆಟ್‌ನನ್ನು ಒಂದು ತಿಂಗಳ ಮುನ್ನವೇ ಮಂಡಿಸಲು ನಿರ್ಧರಿಸಿರುವ ಸರ್ಕಾರ, ರೈಲ್ವೆ ಬಜೆಟ್ ನ್ನು ಇದರಲ್ಲಿ ಸೇರಿಸಲಿರುವುದರಿಂದ ಈ ಪ್ರಕ್ರಿಯೆಯನ್ನು ಸರಳಗೊಳಿಸಲು ಅನಗತ್ಯ ವರ್ಗೀಕರಣಗಳನ್ನು ತೆಗೆದು ಹಾಕಲಿದೆ.

ಅಲ್ಲದೇ ಫೆಬ್ರವರಿ ಬದಲು ಜನವರಿ ತಿಂಗಳಲ್ಲಿ ಸಾಮಾನ್ಯ ಬಜೆಟ್ ಮಂಡನೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರೊಂದಿಗೆ ಯೋಜನಾ- ಯೋಜನೇತರ ವೆಚ್ಚಗಳ ನಡುವೆ ವರ್ಗಿಕರಣ ಮಾಡುವುದನ್ನು ಕೈ ಬಿಡಲು ತೀರ್ಮಾನ ಕೈಗೊಳ್ಳಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಶೇ.20ರಷ್ಟು ಹೆಚ್ಚಿಸಲು ಹಾಗೂ ದೇಶದ ಅನೇಕ ರಾಜ್ಯಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಆಗದಿರುವುದರಿಂದ ಒಂದು ವರ್ಷಕ್ಕೆ ಅಗತ್ಯವಾದಷ್ಟು ದವಸ- ಧಾನ್ಯಗಳು, ಖಾದ್ಯ ತೈಲಗಳ ಮತ್ತು ತೈಲ ಬೀಜಗಳ ದಾಸ್ತಾನು ಮಿತಿ ವಿಸ್ತರಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಜಿಎಸ್ ಟಿ ಮಸೂದೆಗೆ ರಾಷ್ಟ್ರಪತಿ ಅಂಕಿತ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited