Untitled Document
Sign Up | Login    
Dynamic website and Portals
  
September 22, 2016

ಮುಂಬೈ ನೌಕಾ ವಲಯದಲ್ಲಿ ಶಂಕಾಸ್ಪದ ವ್ಯಕ್ತಿಗಳ ಚಲನವಲನ: ತೀವ್ರ ಶೋಧ

ಮುಂಬೈ ನೌಕಾ ವಲಯದಲ್ಲಿ ಶಂಕಾಸ್ಪದ ವ್ಯಕ್ತಿಗಳ ಚಲನವಲನ: ತೀವ್ರ ಶೋಧ

ಮುಂಬೈ : ಮುಂಬೈನ ಕಡಲ ತೀರದ ಉರಾನ್ ನೌಕಾ ನೆಲೆ ವಲಯದಲ್ಲಿ ಮಿಲಿಟರಿ ಸಮವಸ್ತ್ರದಲ್ಲಿ ಕೆಲ ವ್ಯಕ್ತಿಗಳು ಶಂಕಾಸ್ಪದವಾಗಿ ಓಡಾಡುತ್ತಿದ್ದುದಾಗಿ ಶಾಲಾ ಮಕ್ಕಳು ತಿಳಿಸಿದ್ದು, ಈ ಹಿನ್ನಲೆಯಲ್ಲಿ ಮುಂಬೈನಾಧ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ಬೆಳಗ್ಗೆ 6 ಗಂಟೆಯ ಹೊತ್ತಿಗೆ ಸೇನಾ ಸಮವಸ್ತ್ರದಲ್ಲಿ ಕಾಣಿಸಿಕೊಂಡ ನಾಲ್ಕರಿಂದ ಐದುಜನರಿದ್ದ ಅಪರಿಚಿತ ತಂಡ ಶಸ್ತ್ರಾಸ್ತ್ರಗಳೊಂದಿಗೆ ಉರಾನ್‌ ನೌಕಾ ನೆಲೆಯ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು ಎನ್ನಲಾಗಿದೆ.

ಪಶ್ಚಿಮ ನೌಕಾ ಪಡೆ ಮುಂಬೈ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಿದೆ ಮತ್ತು ಮುಂಬಯಿ ಉಗ್ರ ನಿಗ್ರಹ ದಳದೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಸಾಗರ ಭದ್ರತಾ ಪಡೆಯ ಮಾರ್ಕೋಸ್‌ ಕಮಾಂಡೋಗಳನ್ನು ಉರಾನ್‌ ನೌಕಾ ನೆಲೆಯಲ್ಲಿ ನಿಯೋಜಿಸಲಾಗಿದೆ.

ಮುಂಬಯಿ ಪೊಲೀಸರು ನಾಕಾಬಂದಿ ಜಾರಿಗೊಳಿಸಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿರುವುದಾಗಿ ತಿಳಿದು ಬಂದಿದೆ. ಕೊಲಾಬಾ ಪೊಲೀಸ್‌ ದಳ ಕೂಡ ತನ್ನ ಉನ್ನತ ಅಧಿಕಾರಿಗಳನ್ನು ವಿಚಕ್ಷಣಾ ಕಾರ್ಯಕ್ಕೆ ನಿಯೋಜಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited