Untitled Document
Sign Up | Login    
Dynamic website and Portals
  
September 23, 2016

ಕಾವೇರಿ ಜಲ ವಿವಾದ: ವಿಧಾನಮಂಡಲ ವಿಶೇಷ ಅಧಿವೇಶನ

ಕಾವೇರಿ ಜಲ ವಿವಾದ: ವಿಧಾನಮಂಡಲ ವಿಶೇಷ ಅಧಿವೇಶನ

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಂಕಷ್ಟ ಹಿನ್ನಲೆಯಲ್ಲಿ ಇಂದು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪಿನ ಅನುಸಾರ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಐತಿಹಾಸಿಕ ನಿರ್ಣಯವನ್ನು ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳುವ ಸಾಧ್ಯತೆಯಿದೆ.

ಸದ್ಯದ ಸಂಕಷ್ಟ ಪರಿಸ್ಥಿತಿಯಲ್ಲಿ ತಮಿಳು ನಾಡಿಗೆ ನೀರು ಬಿಡಲು ಆಗುವುದಿಲ್ಲ ಎಂಬ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಿ, ಅದರ ಮೇಲೆ ಎಲ್ಲ ಪಕ್ಷಗಳ ಮುಖಂಡರು ಚರ್ಚೆ ನಡೆಸಲಿದ್ದಾರೆ. ಅನಂತರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲು ಉದ್ದೇಶಿಸಲಾಗಿದೆ. ನಂತರ ಈ ನಿರ್ಣಯವನ್ನು ರಾಷ್ಟ್ರಪತಿಗಳಿಗೆ ತಲು ಪಿಸುವ ಸಾಧ್ಯತೆಯಿದೆ.

ವಿಧಾನಮಂಡಲದ ನಿರ್ಣಯವನ್ನು ಪ್ರಮಾಣಪತ್ರದ ರೂಪದಲ್ಲಿ ಸುಪ್ರೀಂ ಕೋರ್ಟ್‌ಗೂ ಸಲ್ಲಿಸಲು ನಿರ್ಧರಿಸಲಾಗಿದೆ. ಒಟ್ಟಾರೆಯಾಗಿ ಪ್ರಸಕ್ತ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾವೇರಿ ನದಿ ವಿವಾದಕ್ಕೆ ಸಂಬಂದಿಸಿದಂತೆ ಇಂದು ನಡೆಯಲಿರುವ ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ಯಾವರೀತಿ ನಿರ್ಣಯ ಕೈಗೊಳ್ಳಲಾಗುವುದು ಎಂಬುದನ್ನು ಕಾದುನೋಡಬೇಕಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited