ಬೆಂಗಳೂರು : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಕೆ.ಜೆ.ಜಾರ್ಜ್ ಮತ್ತೆ ರಾಜ್ಯ ಸಚಿವ ಸಂಪುಟ ಸೇರ್ಪಡೆಯಾಗಲಿದ್ದಾರೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ಒಪ್ಪಿಗೆ ನೀಡಿಡ ಹಿನ್ನೆಲೆಯಲ್ಲಿ ಜಾರ್ಜ್ ಅವರು ಸೆ.26ರಂದು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ ಪ್ರಸಾದ್ ಗೆ ಸಿಐಡಿ ಕ್ಲೀನ್ ಚಿಟ್ ನೀಡಿತ್ತು. ಈ ಹಿನ್ನಲೆಯಲ್ಲಿ ಕೆ.ಜೆ ಜಾರ್ಜ್ ಸಚಿವ ಸಂಪುಟ ಸೇರ್ಪಡೆ ಹಾದಿ ಸುಗಮವಾದಂತಾಗಿದೆ.
ಕಾವೇರಿ ಜಲ ವಿವಾದ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಜತೆಯೂ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಕೆ.ಜೆ ಜಾರ್ಜ್ ಮತ್ತೆ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.