Untitled Document
Sign Up | Login    
Dynamic website and Portals
  
September 26, 2016

ಸಚಿವರಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿದ ಜಾರ್ಜ್

ಸಚಿವರಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿದ ಜಾರ್ಜ್

ಬೆಂಗಳೂರು : ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್‌ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡಿರುವ ಹಿನ್ನಲೆಯಲ್ಲಿ ಜಾರ್ಜ್ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ಆರ್‌.ವಾಲಾ ಅವರು ಕೆ.ಜೆ ಜಾರ್ಜ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ, ಸಚಿವರಾದ ಹೆಚ್ ಎಸ್ ಮಹದೇವ ಪ್ರಸಾದ್, ರಾಮಲಿಂಗಾ ರೆಡ್ಡಿ, ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಯ ಸಿಕ್ಕಿದೆ. ಇದರಿಂದ ಪಕ್ಷಕ್ಕೂ ಗೆಲುವು ದೊರಕಿದಂತಾಗಿದೆ. ಈ ಪ್ರಕರಣದಲ್ಲಿ ಸಿಐಡಿ ಕ್ಲೀನ್‍ಚಿಟ್ ನೀಡಿದೆ ಎಂದು ಜಾರ್ಜ್ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited