Untitled Document
Sign Up | Login    
Dynamic website and Portals
  
September 27, 2016

ಕಾವೇರಿ ವಿವಾದ: ರಾಜ್ಯಕ್ಕೆ ಮತ್ತೆ ಹಿನ್ನಡೆ; ತುರ್ತು ಸಚಿವ ಸಂಪುಟ ಸಭೆ

ಬೆಂಗಳೂರು : ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೆ.28ರಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಸೆ.20ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ದ್ವಿಸದಸ್ಯ ಪೀಠ, ಸೆ.28ರಿಂದ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಮೂರು ದಿನಗಳ ಕಾಲ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸೂಚನೆ ನೀಡಿದೆ.

 

 

Share this page : 
 

Table 'bangalorewaves.bv_news_comments' doesn't exist