Untitled Document
Sign Up | Login    
Dynamic website and Portals
  
September 27, 2016

ತಮಿಳುನಾಡಿಗೆ ನೀರು ಹರಿಸಿದರೆ ಹೋರಾಟದ ಎಚ್ಚರಿಕೆ: ಜಿ.ಮಾದೇಗೌಡ

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶ ಪಾಲನೆಮಾಡಲು ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಹರಿಸಲು ಮುಂದಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಎಚ್ಚರಿಕೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು, ಒಂದು ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಲು ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ವಿಚಾರಣೆ ಮುಂದೂಡಿದೆ. ಆದರೆ, ಎರಡು ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ. ನ್ಯಾಯಾಲಯದ ಆದೇಶ ಸಮಂಜಸವಾದುದಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರೆ ಇಲ್ಲದಿರುವಾಗ ತಮಿಳುನಾಡಿಗೆ ಹೇಗೆ ನೀರು ಬಿಡುವುದು ಎಂದು ಪ್ರಶ್ನಿಸಿದ್ದಾರೆ.

 

 

Share this page : 
 

Table 'bangalorewaves.bv_news_comments' doesn't exist