ಬೆಂಗಳೂರು : ಕಾವೇರಿ ನದಿನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭದ್ರತೆಗಾಗಿ 14 ಅರೆಸೇನಾ ಪಡೆಗಳನ್ನು ನಗರದಾದ್ಯಂತ ನಿಯೋಜಿಸಲಾಗಿದೆ. ಬಿಎಸ್ಎಫ್, ಆರ್ಎಎಫ್, ಸಿಐಎಸ್ಎಫ್, ಎಸ್ಎಸ್ಎಫ್, ಐಟಿಬಿಪಿ ಪಡೆಗಳನ್ನು ವಿವಿಧೆಡೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗೃತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
40 ಕೆಎಸ್ಆರ್ಪಿ ತುಕಡಿ, 30 ಸಿಎಆರ್ ತುಕಡಿ ಹಾಗೂ ಆಯಾ ವಿಭಾಗಗಳಲ್ಲಿ ಡಿಸಿಪಿ ನೇತೃತ್ವದಲ್ಲಿ ಸಿವಿಲ್ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಮೇಘರಿಕ್ ತಿಳಿಸಿದ್ದಾರೆ.