Untitled Document
Sign Up | Login    
Dynamic website and Portals
  
October 1, 2016

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಬೆಳಗ್ಗೆ 11.40ರ ಶುಭ ಧನುರ್ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ದೀಪ ಬೆಳಗಿಸುವ ಮೂಲಕ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ನೀಡಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚೆನ್ನವೀರ ಕಣವಿ ಅವರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು. ದಸರಾ ಮಹೋತ್ಸವ ಚಾಲನೆ ಕಾರ್ಯಕ್ರಮದಲ್ಲಿ ಹೆಚ್.ಸಿ ಮಹದೇವಪ್ಪ, ಕ್ರೀಡಾಪಟು ದೀಪಾ, ಅಶ್ವಿನಿ ಪೊನ್ನಪ್ಪ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಎರಡು ರಾಜ್ಯಗಳ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸುವಂತೆ ದೇವಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಬರಗಾಲವಿದ್ದರೂ ಸಂಕಷ್ಟ ಎದುರಾಗಿರಲಿಲ್ಲ. ಆದರೆ, ರಾಜ್ಯದ ಜನತೆ ಈ ಬಾರಿ ತೊಂದರೆಗೆ ಸಿಲುಕಿರುವುದರಿಂದ ದಸರಾ ಉತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ ಎಂದರು. ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪಾಲಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಶೇ.40ರಷ್ಟು ಮಳೆ ಕಡಿಮೆ ಆಗಿದ್ದು, ಕಾವೇರಿ ಜಲಾನಯನ ಪ್ರದೇಶಗಳಲ್ಲೂ ಮಳೆ ಆಗದೆ ಸಮಸ್ಯೆ ಎದುರಾಗಿದೆ. ಇದೇ ಸಂದರ್ಭದಲ್ಲಿ ನ್ಯಾಯಾಲಯ ಕೂಡ ನೀರು ಹರಿಸುವಂತೆ ಆದೇಶ ನೀಡಿರುವುದರಿಂದ ಬಿಕ್ಕಟ್ಟು ಬಿಗಡಾಯಿಸಿದೆ ಎಂದರು.

ನಮ್ಮಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಹಾಗಾಗಿ ರೈತರಿಗೂ ಸಹ ಬೆಳೆ ಬೆಳೆಯದಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited