ನವದೆಹಲಿ : ಇಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮತ್ತು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಎಲ್.ಕೆ. ಅಡ್ವಾಣಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನವನ್ನು ಸಲ್ಲಿಸಿದರು.
ಇಂದು ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹುಟ್ಟುಹಬ್ಬವೂ ಆಗಿದ್ದು, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕಕ್ಕೂ ಪ್ರಧಾನಿ ಮೋದಿ, ರಾಷ್ಟಪತಿಯವರು ಪುಷ್ಪನಮವನ್ನು ಸಲ್ಲಿಸಿದ್ದಾರೆ.
ರಾಷ್ಟ್ರಪಿತ ಗಾಂಧೀಜಿ ಹಾಗೂ ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.