ನವದೆಹಲಿ : ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಕರ್ನಾಟಕದ ನೆರವಿಗೆ ಧಾವಿಸಿದೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಸೆಪ್ಟೆಂಬರ್ 30ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸ್ವತಃ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಸುಪ್ರೀಂಕೋರ್ಟ್ ಗೆ ಅಟಾರ್ನಿ ಜನರಲ್ ಮುಕುಲ್ ರೊಹಟ್ಗಿ ಅವರೇ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿಸಿದ್ದು, ಸುಪ್ರೀಂ ಕೋರ್ಟ್ ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸುವಂತಿಲ್ಲ. ಮಂಡಳಿ ರಚನೆ ಏನಿದ್ದರೂ ಸಂಸತ್ತಿನ ಜವಾಬ್ದಾರಿಯಾಗಿದ್ದು, ಉಭಯ ಸದನಗಳ ಅನುಮೋದನೆ ಪಡೆದು ಮಂಡಳಿ ರಚಿಸಬೇಕಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಸೆಪ್ಟೆಂಬರ್ 30ರಂದು ನಡೆದ ವಿಚಾರಣೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸುವುದಾಗಿ ಹೇಳಿದ್ದ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರೇ ಇಂದು ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದು ವಿಶೇಷ.