ಬೆಂಗಳೂರು : ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಬಾರದೆಂದು ರಾಜ್ಯ ಸರ್ಕಾರ ರಾತ್ರಿಯಿಂದಲೆ ತಮಿಳುನಾಡಿಗೆ ನೀರು ಹರಿಸಿದೆ.
ಕರ್ನಾಟಕ ಸಲ್ಲಿಸಿರುವ ಅರ್ಜಿಯ ಮರುವಿಚಾರಣೆ ಇದೇ ಅಕ್ಟೋಬರ್ 18ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಯಾವುದೇ ಹಿನ್ನಡೆಯಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಉಭಯ ಸದನಗಳ ಅನುಮತಿ ಪಡೆದು ತಮಿಳುನಾಡಿಗೆ ನೀರು ಹರಿಸುತ್ತಿದೆ.
ರಾಜ್ಯದ ಪ್ರಮುಖ ಜಲಾಶಯಗಳಾದ ಕೃಷ್ಣರಾಜ ಸಾಗರ, ಕಬಿನಿ, ಹಾರಂಗಿ ಮತ್ತು ಜಲಾಶಯಗಳ ಮೂಲಕ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಕೇವಲ ತಮಿಳುನಾಡಿಗೆ ಮಾತ್ರವಲ್ಲದೇ ರಾಜ್ಯದ ರೈತರಿಗೂ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಮೈಸೂರಿನ ವಿಸಿ ನಾಲೆ ಮೂಲಕವಾಗಿ ಕಾವೇರಿ ಕೊಳ್ಳದ ರೈತರಿಗೆ ರಾತ್ರಿಯಿಂದಲೇ ನೀರು ಹರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.