Untitled Document
Sign Up | Login    
Dynamic website and Portals
  
September 25, 2017

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ನವದೆಹಲಿ : ಬಿಜೆಪಿ ಸಾಧನೆ ಆಧರಿಸಿದ ರಾಜಕೀಯಕ್ಕೆ ಮಹತ್ವ ನೀಡುತ್ತದೆ. ಆದರೆ ಕಾಂಗ್ರೆಸ್ ಕುಟುಂಬ ರಾಜಕೀಯ ಮತ್ತು ಓಲೈಕೆ ರಾಜಕೀಯ ಮಾಡುತ್ತದೆ ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆನುವಂಶೀಯ ರಾಜಕೀಯವನ್ನು ಸಮರ್ಥಿಸಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ದೇಶ ರಾಜಕಾರಣಕ್ಕೆ ಆನುವಂಶಿಕತೆಯ ಕೊಡುಗೆಯನ್ನು ನೀಡಿದ್ದು ಕಾಂಗ್ರೆಸ್‌ ಪಕ್ಷ ಹೊರತು ಬೇರೆ ಯಾರೂ ಅಲ್ಲ. ಆದರೆ ಬಿಜೆಪಿ ಉತ್ತಮ ಕಾರ್ಯನಿರ್ವಹಣೆಮಾಡುವವರ ಸಾಧನೆಯನ್ನು ಬೆಂಬಲಿಸುತ್ತದೆ. ಇದಕ್ಕೆ ಇಂದಿನ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಎಲ್ಲರೂ ತಮ್ಮ ಕಠಿಣ ಶ್ರಮದಿಂದಾಗಿ ಆಹುದ್ದೆಯನ್ನು ಏರಿರುವುದೇ ಸಾಕ್ಷಿ ಎಂದು ಹೇಳಿದರು.

ಬಿಜೆಪಿ ಉತ್ತಮ ಕಾರ್ಯ ನಿರ್ವಹಣೆಯನ್ನು ಸಾಧಿಸಿ ತೋರಿಸುವ ರಾಜಕಾರಣದಲ್ಲಿ ನಂಬಿಕೆ ಇರಿಸಿದೆ. ಸ್ವಚ್ಚತೆ, ಬಡತನ ನಿರ್ಮೂಲನೆ, ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ವಿರುದ್ಧ ಹೋರಾಟ, ಜಾತಿ ಮತ್ತು ಕೋಮು ರಾಜಕಾರಣದ ಅಂತ್ಯಕ್ಕೆ ಹೋರಾಟದೊಂದಿಗೆ ಸಮಗ್ರ ಜನಕಲ್ಯಾಣಕ್ಕೆ ಬದ್ಧತೆ ತೋರುವ ಅದಮ್ಯ ವಿಶ್ವಾಸವನ್ನು ಹೊಂದಿದೆ ಎಂದರು.

ದೆಹಲಿಯಲ್ಲಿ ಅರಂಭವಾಗಿರುವ ಬೊಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಎರಡು ದಿನಗಳ ಕಾಲ ನಡೆಯಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited