Untitled Document
Sign Up | Login    
Dynamic website and Portals
  
September 29, 2017

ಮುಂಬೈ: ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ: 22 ಮಂದಿ ಸಾವು

ಮುಂಬೈ: ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ: 22 ಮಂದಿ ಸಾವು

ಮುಂಬೈ : ಮುಂಬೈನ ಎಲ್ಫಿನ್‍ಸ್ಟೋನ್ ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ ಉಂಟಾದ ಪರಿಣಾಮ 22 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಮುಂಬೈ ನಗರದಲ್ಲಿ ಭಾರಿ ಮಳೆಯಿಂದಾಗಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಬೆಳಗ್ಗೆ 10.30ರ ವೇಳೆ ಪರೇಲ್ ಮತ್ತು ಎಲ್ಫಿನ್‍ಸ್ಟೋನ್ ರೋಡ್ ಸ್ಟೇಷನ್ ನಡುವೆಯಿರುವ ಪಾದಚಾರಿಗಳ ಸಂಚಾರ ಮಾರ್ಗ ಸೇತುವೆ ಮೇಲೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ, 30 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಕಾದು ಕುಳಿತಿದ್ದರು. ರೈಲು ಬಂದೊಡನೆ ಅದನ್ನು ಏರುವ ಅವಸರದಲ್ಲಿ ಜನರು ಓಡುವಾಗ ಕಾಲ್ತುಳಿತ ಸಂಭವಿಸಿದೆ ಎಂದು ರೈಲ್ವೆ ವಕ್ತಾರ ಅನಿಲ್ ಸಕ್ಸೇನಾ ಹೇಳಿದ್ದಾರೆ.

ಘಟನೆ ಬಳಿಕ ವೈದ್ಯಕೀಯ ತಂಡ ಹಾಗೂ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited