ಇಸ್ಲಾಮಾಬಾದ್ : ಭಾರತದ ಪ್ರಧಾನಿ ನರೇಂದ್ರ ಮೋದಿ ಓರ್ವ ಟೆರರಿಸ್ಟ್. ಆರ್ ಎಸ್ ಎಸ್ ಒಂದು ಉಗ್ರ ಸಂಘಟನೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಖ್ವಾಜಾ ಮೊಹಮ್ಮದ್ ಆಸೀಫ್ ವಾಗ್ದಾಳಿ ನಡೆಸಿದ್ದಾರೆ.
ಪಾಕ್ ನ ಜಿಯೋ ಸುದ್ದಿವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿರುವ ಖ್ವಾಜಾ ಆಸೀಫ್ ಅವರು, ಪಾಕಿಸ್ತಾನ ಭಯೋತ್ಪಾದನೆಯನ್ನು ರಫ್ತು ಮಾಡುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಆರೋಪಿಸಿದ್ದಾರೆ. ಭಾರತದ ಪ್ರಧಾನಮಂತ್ರಿಯೇ ಓರ್ವ ಉಗ್ರ. ಗುಜರಾತ್ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ ಮುಸ್ಲಿಮರ ರಕ್ತದ ಕಲೆ ಪ್ರಧಾನಿ ಮೋದಿಯವರ ಕೈಯಲ್ಲಿದೆ ಎಂದು ಹೇಳಿದ್ದಾರೆ.
ಉಗ್ರ ಸಂಘಟನೆಯಾಗಿರುವ ಆರ್ ಎಸ್ಎಸ್ ಭಾರತದಲ್ಲಿ ಅಧಿಕಾರ ನಡೆಸುತ್ತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಭಾರತದಲ್ಲಿನ ಭಯೋತ್ಪಾದಕರ ಒಂದು ಭಾಗವಾಗಿದ್ದು, ಆರ್ ಎಸ್ಎಸ್ ಹೇಳಿದಂತೆ ಪ್ರಧಾನಿ ಮೋದಿ ಅಧಿಕಾರ ನಡೆಸುತ್ತಿದ್ದಾರೆಂದು ಆರೋಪಿಸಿದ್ದಾರೆ.