ಶ್ರೀನಗರ : ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ರಾಜಗೋಪಾಲ ನಗರದ ನಿವಾಸಿ ನರೇಂದ್ರ ಎಂಬ ಯೋಧನೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಇವರು ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಯೋಧನ ಸಾವಿನ ಕುರಿತು ಸೇನೆಯ ಹಿರಿಯ ಅಧಿಕಾರಿಗಳು ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ನರೇಂದ್ರನ ತಾಯಿ ನನ್ನ ಮಗ ಯಾವುದೇ ಕಾರಣಕ್ಕೂ ಅತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ನನ್ನ ಮಗನ ಸಾವಿನ ಕಾರಣ ತಿಳಿಯಬೇಕು ಎಂದು ಒತ್ತಾಯಿಸಿದ್ದಾರೆ.