ಅಲಹಾಬಾದ್ : ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಆರುಷಿ ತಲ್ವಾರ್ ಹಾಗೂ ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ತಂದೆ-ತಾಯಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ದಂಪತಿಗ್ಯನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೊರ್ಟ್ ತೀರ್ಪು ಪ್ರಕಟಿಸಿದೆ.
2008ರಲ್ಲಿ ನಡೆದಿದ್ದ ಈ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಗಾಜಿಯಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯವು 2013ರ ನವೆಂಬರ್ 26ರಂದು ತಲ್ವಾರ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ತಲ್ವಾರ್ ದಂಪತಿ ಅಲಹಾಬಾದ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ಸೆಪ್ಟೆಂಬರ್ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಬಿ.ಕೆ. ನಾರಾಯಣ ಮತ್ತು ನ್ಯಾಯಾಮೂರ್ತಿ ಎ.ಕೆ ಮಿಶ್ರಾ ಅವರನ್ನೊಳಗೊಂಡ ಪೀಠ ತೀರ್ಪನ್ನು ಕಾದಿರಿಸಿತ್ತು. ಇಂದು ತೀರ್ಪನ್ನು ಪ್ರಕಟಿಸಿರುವ ನ್ಯಾಯಪೀಠ, ರಾಜೇಶ್ ಮತ್ತು ನೂಪುರ್ ದಂಪತಿ ತಮ್ಮ ಮಗಳು ಮತ್ತು ಮನೆ ಕೆಲಸದ ಸಹಾಯಕ ಹೇಮರಾಜ್ ಕೊಲೆಯ ಹೊಣೆಗಾರರಲ್ಲ ಎಂದು ಹೇಳಿದೆ.
ರಾಜೇಶ್ ಮತ್ತು ನೂಪುರ್ ಅವರೇ ಈ ಜೋಡಿ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಸೂಕ್ತವಾದ ಸಾಕ್ಷ್ಯಾಧಾರಗಳಿಲ್ಲ ಎಂದು ತಿಳಿಸಿರುವ ನ್ಯಾಯಾಲಯ, ದಂಪತಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
Читать такие новости без подтверждающих фотографий очень непривычно, сделайте хорошие фотографии и выложите на свой сайт семейный фотограф харьков