ನವದೆಹಲಿ : ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
ಮಹಿಳಾ ಪರ ಸಂಘಟನೆಗಳು ಸಲ್ಲಿಕೆ ಮಾಡಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಪ್ರಮುಖ ಆರು ಪ್ರಶ್ನೆಗಳೊಂದಿಗೆ ಅರ್ಜಿಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. ಪ್ರಮುಖವಾಗಿ ಶಬರಿಮಲೈ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ನಿರ್ಬಂಧ ಹೇರಿರುವ ದೇಗುಲದ ಆಡಳಿತ ಮಂಡಳಿ ನಿರ್ಧಾರ, ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ಅಂತೆಯೇ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸುವ ಹಕ್ಕು ದೇಗುಲಕ್ಕೆ ಇದೆಯೇ, ದೇಗುಲದ ಈ ನಡೆ ಸಾಂವಿಧಾನಿಕ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆಯೇ.. ಎಂಬಿತ್ಯಾದಿ ಅಂಶಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ಸೂಚಿಸಿದೆ.
ಕೇರಳದ ಶಬರಿಮಲೈ ದೇಗುಲದಲ್ಲಿ 10 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಈ ಹಿನ್ನಲೆಯಲ್ಲಿ ಮಹಿಲಾ ಸಂಘಟನೆಗಳು ಕೋರ್ಟ್ ಮೆಟ್ಟಿಲೆರಿದ್ದವು.