ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಎಬಿವಿಪಿ ಕಾರ್ಯಕರ್ತರು ಕೆ ಎಸ್ ಒಯು ಮುಚ್ಚದಂತೆ ಅಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಹಲವು ವಿದ್ಯಾರ್ಥಿಗಳು ವಿಧ್ಯಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿ ವಿಧಾನಸೌಧದತ್ತ ನುಗ್ಗಲು ಮುಂದಾಗಿದ್ದಾರೆ. ಈ ವೇಳೆ ಪೊಲಿಸರು ಮುತ್ತಿಗೆ ಹಾಕುವುದನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಪೊಲೀಸರ ಲಾಠ್ಜಿ ಏಟಿಗೆ ಓರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, ಅಕೆಯನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲ ವಿದ್ಯಾರ್ಥಿಗಳು ಸಿಐಡಿ ಕಚೇರಿ ಎದುರು ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. 100 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಡುಕೊಂಡಿದ್ದಾರೆ.