ರಾಮನಗರ : ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.
ರಾಮನಗರದ ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೀಶ್ವರ್, ನಾನು ಕಾಂಗ್ರೆಸ್ ನಾಯಕರ ನಡವಳಿಕೆಯಿಂದ ಬೇಸತ್ತು ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ ಎಂದು ಹೇಳಿದ್ದಾರೆ..
ಕಳೆದ ನಾಲ್ಕು ವರ್ಷಗಳಿಂದ ನಾನು ಕಾಂಗ್ರೆಸ್‌ನಲ್ಲಿದ್ದೆ, ಆದರೆ ನಾಯಕರು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ. ನನಗೆ ಕಾಂಗ್ರೆಸ್ ಟಿಕೇಟ್ ಕೈ ತಪ್ಪಲು ಸಚಿವ ಡಿ.ಕೆ.ಶಿವಕುಮಾರ್ ಅವರೇ ಕಾರಣ ಈ ವೇಳೆ ಯೋಗೇಶ್ವರ್ ಕಿಡಿಕಾರಿದ್ದಾರೆ.
ತಮ್ಮ ರಾಜಕೀಯ ಜೀವನದ ಮುಂದಿನ ನಿರ್ಧಾರವನ್ನು ಅಕ್ಟೋಬರ್ 22 ಕ್ಕೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
2008 ರಲ್ಲಿ ಆಪರೇಷನ್ ಕಮಲಕ್ಕೆ ಗುರಿಯಾಗಿ ಕಾಂಗ್ರೆಸ್ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಚಿವರಾಗಿದ್ದರು, ಉಪಚುನವಾಣೆಯಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾಗಿದ್ದರು. 2013 ರ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ಜಯಗಳಿಸಿದ್ದ ಯೋಗೀಶ್ವರ್ ಆಡಳಿತೂರೂಢ ಕಾಂಗ್ರೆಸ್‌ಗೆ ಪುನರ್ ಸೇರ್ಪಡೆಯಾಗಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು.