Untitled Document
Sign Up | Login    
Dynamic website and Portals
  
October 16, 2017

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ

B T M Layout : ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಈ ನಡುವೆ ಸತತ 4 ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದ ಮೂರು ವರ್ಷದ ಮಗು ಪವಾಡ ಸದೃಶವಾಗಿ ಬದುಕುಳಿದಿದ್ದಾಳೆ.

ಈಜೀಪುರದಲ್ಲಿ ಇಂದು ಬೆಳಿಗ್ಗೆ ಅಡುಗೆಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರಂತಸ್ತಿನ ಕಟ್ಟಡ ಕುಸಿತಗೊಂಡಿತ್ತು. ಅವಘದದಲ್ಲಿ ಒಂದೇ ಮನೆಯ ಐವರು ಜೀವಂತ ಸಮಾಧಿಯಾಗಿದ್ದರು.

ಕಟ್ಟಡ ಕುಸಿತದ ದುರಂತದಲ್ಲಿ ಅವಶೇಷಗಳಡಿ ಸಿಲುಕಿದ್ದ ಮೂರು ವರ್ಷದ ಮಗು ಸಂಜನಾಳ ಅಳು ಕೇಳಿಸಿಕೊಂಡ ಅಗ್ನಿಶಾಮಕ ದಳದ ಸಿಬ್ಬಂದಿ ಸತತವಾಗಿ ಕಾರ್ಯನಿರ್ವಹಿಸುವ ಮೂಲಕ ಮಗುವನ್ನು ಜೀವಂತವಾಗಿ ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಮಗು ಸಂಜನಾಳ ತಂದೆ, ತಾಯಿ ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಗರ್ಭಿಣಿ ಅಶ್ವಿನಿಯ ಶವಪತ್ತೆಯಾಗಿದ್ದು, ಅದನ್ನು ಅಗ್ನಿಶಾಮಕದಳದ ಸಿಬ್ಬಂದಿಯವರು ಹೊರತೆಗೆದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮೂವರು ಶಂಕಿತ ಹಂತಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ.
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • ಕರ್ತವ್ಯ ನಿರತ ರಾಜ್ಯದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited